ಬೆಂಗಳೂರು: ಕನ್ನಡ ನಾಮಫಲಕ ಹಾಕೋ ಸಂಬಂಧ ವಾಣಿಜ್ಯ ಮಳಿಗೆಗಳ ಮುಂದಿದ್ದಂತ ಬೋರ್ಡ್ ಹೊಡೆದು ಹಾಕಿದ ಪ್ರಕರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರನ್ನು ಬಂಧಿಸಿ ಜೈಲಿಗಟ್ಟಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ನೀಡಿದ ಬಳಿಕ ಬಿಡುಗಡೆಯಾಗಿದ್ರು. ಬಿಡುಗಡೆಯಾದ ಕೆಲವೇ ಕ್ಷಣದಲ್ಲಿ ಮತ್ತೆ ಬಂಧಿಸಲಾಗಿತ್ತು. ಹೀಗಾಗಿ ಮತ್ತೆ ಜೈಲುಪಾಲಾಗಿದ್ದರು. ಇದೀಗ ಮತ್ತೊಂದು ಪ್ರಕರಣದಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡಗೆ ಜಾಮೀನು ಮಂಜೂರಾಗಿದೆ.

ಕನ್ನಡ ನಾಮಫಲಕ ಅಳವಡಿಕೆ ಹೋರಾಟದಲ್ಲಿ ಬಂಧನಕ್ಕೊಳಗಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಅಧ್ಯಕ್ಷ ನಾರಾಯಣಗೌಡ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಗೊಂಡರು. ನಾರಾಯಣಗೌಡ ಬಿಡುಗಡೆಯಾಗುತ್ತಿದ್ದಂತೆ ಕುಮಾರಸ್ವಾಮಿ ಲೇಔಟ್ ನ ಪೊಲೀಸರೂ ವಶಕ್ಕೆ ಪಡೆದುಕೊಂಡಿದ್ದರು.

2017ರಲ್ಲಿ ನಡೆದಂತ ಪ್ರಕರಣ ಸಂಬಂಧ ಕರವೇ ಅಧ್ಯಕ್ಷ ನಾರಾಯಣಗೌಡ ಅವರನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣ ಸಂಬಂಧ ಸಲ್ಲಿಸಲಾಗಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ಇಂದಿಗೆ ತೀರ್ಪು ಕಾಯ್ದಿರಿಸಿದೆ. ಈ ಹಿನ್ನಲೆಯಲ್ಲಿ ಆದೇಶ ಇಂದು ಕಾಯ್ದಿರಿಸಿದ ಕಾರಣ ಮತ್ತೆ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದರು.

ಇದೀಗ ಬೆಂಗಳೂರಿನ 30ನೇ ಎಸಿಎಂಎಂ ಕೋರ್ಟ್ ತನ್ನ ಕಾಯ್ದಿರಿಸಿದ್ದಂತ ಜಾಮೀನು ಆದೇಶದ ತೀರ್ಪು ಪ್ರಕಟಿಸಿದೆ. ತನ್ನ ತೀರ್ಪಿನಲ್ಲಿ ಕರವೇ ಅಧ್ಯಕ್ಷ ನಾರಾಯಣಗೌಡ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ಈ ಮೂಲಕ ಬಿಡುಗಡೆಯಾದ ಕೆಲವೇ ಗಂಟೆಯಲ್ಲಿ ಕುಮಾರಸ್ವಾಮಿ ಲೇಔಟ್ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಜೈಲು ಪಾಲಾಗಿದ್ದಂತ ಕರವೇ ಅಧ್ಯಕ್ಷ ನಾರಾಯಣಗೌಡಗೆ ಜಾಮೀನು ಸಿಕ್ಕು, ಜೈಲಿನಿಂದ ಬಿಡುಗಡೆಗೆ ಅವಕಾಶ ಸಿಕ್ಕಂತೆ ಆಗಿದೆ.

ಅಂದಹಾಗೇ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರನ್ನು 2017ರ ಕೇಸ್ ನಲ್ಲಿ ಬಂಧಿಸಲಾಗಿತ್ತು. ಬಂಧನದ ಬಳಿಕ ಅವರು ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನೆಡೆಸಿದ್ದಂತ ಕೋರ್ಟ್ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಹೀಗಾಗಿ ಮತ್ತೆ ಪರಪ್ಪನಹ ಅಗ್ರಹಾರ ಜೈಲಿಗೆ ಕರವೇ ಅಧ್ಯಕ್ಷ ನಾರಾಯಣಗೌಡ ಶಿಫ್ಟ್ ಆಗಿದ್ದರು. ಈಗ ಈ ಪ್ರಕರಣದಲ್ಲಿ ಜಾಮೀನು ಸಿಕ್ಕಿದೆ.

ಭಾರತ ವಿರುದ್ಧದ ಟಿ20 ಸರಣಿಯಿಂದ ‘ರಶೀದ್ ಖಾನ್’ ಔಟ್

ಲೋಕಸಭೆ ಚುನಾವಣೆ ತಯಾರಿಗೆ ಪೂರ್ವಭಾವಿ ಸಭೆ – ಡಿಸಿಎಂ ಡಿ.ಕೆ. ಶಿವಕುಮಾರ್

Share.
Exit mobile version