ಬೆಳಗಾವಿ : ರಾಜ್ಯಾದ್ಯಂತ ಕನ್ನಡ ನಾಮಫಲಕ ಅಳವಡಿಸುವ ಕುರಿತಾಗಿ ಈ ಹಿಂದೆ ಕರ್ನಾಟಕ ರಾಜ್ಯ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಪ್ರತಿಭಟನೆ ಹಾಗೂ ಹೋರಾಟ ಮಾಡಿ ಜೈಲಿಗೆ ಕೂಡ ಹೋಗಿದ್ದರು. ಇದೀಗ ಬೆಳಗಾವಿಯಲ್ಲಿ ಮಾತನಾಡಿದ ಅವರು, ಫೆಬ್ರವರಿ 28ರ ಒಳಗಾಗಿ ರಾಜ್ಯಾದ್ಯಂತ ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯಗೊಳಿಸದಿದ್ದರೆ ಮತ್ತೆ ಹೋರಾಟ ಮಾಡಲಾಗುತ್ತದೆ ಎಂದು ತಿಳಿಸಿದರು.
‘ಸಿದ್ರಾಮುಲ್ಲಾಖಾನ್’ ಗೆ ನೌಕರರಿಗೆ ಸಂಬಳ ನೀಡಲು ಹಣವಿಲ್ಲ : ಮತ್ತೆ ವಿವಾದದ ಕಿಡಿ ಹೊತ್ತಿಸಿದ ಸಂಸದ ಹೆಗಡೆ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಬೆಳಗಾವಿ ಜಿಲ್ಲೆ ಅಚ್ಚುಮೆಚ್ಚು. ಇಲ್ಲಿ ಕರವೇ ಗಟ್ಟಿಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದೆ. ನಾಡು-ನುಡಿ ವಿಚಾರದಲ್ಲಿ ಕಳೆದ 25 ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಿದ್ದೇವೆ. ಕನ್ನಡ ಕಟ್ಟುವ, ಕಾಯುವ ಕೆಲಸ ಮಾಡುತ್ತಿದ್ದೇವೆ. ಶನಿವಾರ ಬೆಳಗಾವಿಯಲ್ಲಿ ಕರವೇಯ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ರಾಜ್ಯದ ಎಲ್ಲ ಜಿಲ್ಲೆಗಳ ಅಧ್ಯಕ್ಷರು ಪಾಲ್ಗೊಳ್ಳುವರು. ಈ ವೇಳೆ, ಮುಂದಿನ ಹೋರಾಟದ ರೂಪುರೇಷೆಗಳನ್ನು ತೀರ್ಮಾನಿಸಲಾಗುವುದು ಎಂದರು.
ಲೋಕಸಭೆ ಚುನಾವಣೆಯಲ್ಲಿ ಮಂಡ್ಯವನ್ನು ಬಿಜೆಪಿಗೆ ಉಳಿಸಿಕೊಳ್ಳಲು ಹೋರಾಟ:ಸಂಸದೆ ಸುಮಲತಾ
ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಬೆಂಗಳೂರಿನಂತೆಯೇ ಬೆಳಗಾವಿಯಲ್ಲಿಯೂ ಕನ್ನಡೀಕರಣವಾಗಬೇಕು. ಅದಕ್ಕೆ ನಮ್ಮ ಹೋರಾಟ ಗಟ್ಟಿಯಾಗಿರುತ್ತದೆ. ಇದಕ್ಕೆ ಎಂಇಎಸ್ ವಿರೋಧಿಸಿದರೆ, ಬೆಂಗಳೂರು ಮಾದರಿಯಲ್ಲಿ ಹೋರಾಟ ಮಾಡುತ್ತೇವೆ. ಕನ್ನಡ ನಾಮಫಲಕಕ್ಕೆ ಎಂಇಎಸ್, ಶಿವಸೇನೆ ವಿರೋಧಿಸಿದರೆ ನಾವು ಜಗ್ಗಲ್ಲ. ನಾಡದ್ರೋಹಿ ಎಂಇಎಸ್ ಸರ್ವನಾಶವಾಗಬೇಕು ಎಂದು ಆಗ್ರಹಿಸಿದರು.
BIG BREAKING : ‘ಏಕರೂಪ ಸಂಹಿತೆ’ಯತ್ತ ಹೆಜ್ಜೆಯಿಟ್ಟ ಅಸ್ಸಾಂ ಸರ್ಕಾರ: ಸಂಪುಟದಲ್ಲಿ ‘ಮುಸ್ಲಿಂ ವಿವಾಹ’ ಕಾಯ್ದೆ ರದ್ದು
ಕನ್ನಡದ ಕುರಿತಾಗಿ ನಾನು 6 ಸಲ ಜೈಲಿಗೆ ಹೋಗಿದ್ದೇನೆ. ಸಿದ್ದರಾಮಯ್ಯ ಸರ್ಕಾರ ನನ್ನ ವಿರುದ್ಧ ಸಂಚು ಮಾಡಿ ನನ್ನನ್ನು ಜೈಲಿಗೆ ಕಳಿಸಿತು. ಇಲ್ಲಸಲ್ಲದ ಕೇಸ್ ಹಾಕಿ ನನಗೆ ಹಿಂಸೆ ಕೊಟ್ಟರು. ಆದರೆ, ಕನ್ನಡದ ವಿಚಾರವಾಗಿ ನನ್ನ ಧ್ವನಿ ಅಡಗಿಸಲು ಸರ್ಕಾರದಿಂದ ಸಾಧ್ಯವಿಲ್ಲ. ಜೀವ ಇರುವವರೆಗೆ ಕನ್ನಡ ಪರ ನನ್ನ ಹೋರಾಟ ಇರುತ್ತದೆ. ಕನ್ನಡದ ವಿಚಾರದಲ್ಲಿ ಯಾರೊಂದಿಗೂ ರಾಜೀಯಾಗುವ ಪ್ರಶ್ನೆಯೇ ಇಲ್ಲ. ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಎಂದು ಅವರು ಹೇಳಿದರು.