ಬೆಂಗಳೂರು: ಕೆಎಎಸ್ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2023-24 ನೇ ಸಾಲಿನಲ್ಲಿ ಕೆಎಎಸ್ ಪರೀಕ್ಷೆ ಬರೆಯುವವರಿಗೆ ಒಂದು ಬಾರಿಗೆ ಸೀಮಿತವಾಗಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ ಎಂದು ಸರ್ಕಾರ ಆದೇಶ ನೀಡಿ ಹೊರಡಿಸಿದೆ.2023-24ನೇ ಸಾಲಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ರಿಕ್ತ ಸ್ಥಾನಗಳನ್ನು ತುಂಬಲು ಹೊರಡಿಸುವ ಅಧಿಸೂಚನೆಯಲ್ಲಿ ಅರ್ಹರಿರುವ ಎಲ್ಲಾ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಿದೆ.
ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆ ಆಕಾಂಕ್ಷಿಗಳು ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸಿ ಕೋವಿಡ್-19 ಸಾಂಕ್ರಾಮಿಕ ರೋಗ ಮತ್ತು ಇತರೆ ಕಾರಣದಿಂದ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ಹುದ್ದೆಗೆ ನೇಮಕಾತಿಗಾಗಿ 2021ನೇ ಸಾಲಿನಿಂದ ಪರೀಕ್ಷೆಯನ್ನು ನಡೆಸಿಲ್ಲವಾದ್ದರಿಂದ ಅನೇಕ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆ ಆಕಾಂಕ್ಷಿಗಳು ನೇಮಕಾತಿಗಾಗಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಮೀರಿ ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ ಎಂದು ಹೇಳಿದ್ದರು.ಹಾಗಾಗಿ ವಯೋಮಿತಿ ಹೆಚ್ಚಿಸುವಂತೆ ಮನವಿ ಸಲ್ಲಿಸಿದ್ದರು.