Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯುಎಇನಲ್ಲಿರುವ ಆಸ್ಟ್ರೇಲಿಯಾ ಸೇನಾ ನೆಲೆ ಮೇಲೆ ಇರಾನ್ ದಾಳಿ: ಅಲ್ ಮಿನ್ಹಾದ್ ಬಳಿ ಸ್ಫೋಟ; ಸಿಬ್ಬಂದಿ ಸುರಕ್ಷಿತ

18/03/2026 9:56 AM

BREAKING: ಇಂದೋರ್‌ನಲ್ಲಿ ಇವಿ ಚಾರ್ಜಿಂಗ್ ಪಾಯಿಂಟ್ ಸ್ಫೋಟಗೊಂಡು 6 ಮಂದಿ ದಾರುಣ ಸಾವು; ಹತ್ತಕ್ಕೂ ಹೆಚ್ಚು ಸಿಲಿಂಡರ್‌ಗಳು ಬ್ಲಾಸ್ಟ್!

18/03/2026 9:50 AM

BIG NEWS : ಭಾರತದಲ್ಲಿ ಶೇ. 40% ಪದವೀಧರರು ನಿರುದ್ಯೋಗಿಗಳು : ವರದಿ

18/03/2026 9:39 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: KAS ಮುಖ್ಯ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ: KPSC ಸ್ಪಷ್ಟನೆ
KARNATAKA

BIG NEWS: KAS ಮುಖ್ಯ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ: KPSC ಸ್ಪಷ್ಟನೆ

By kannadanewsnow0906/05/2025 3:27 PM

ಬೆಂಗಳೂರು: ಗೆಜೆಟೆಡ್ ಪ್ರೊಬೆಷನರ್ ಹುದ್ದೆಗಳ ಮುಖ್ಯ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ. ಮಾಧ್ಯಮಗಳಲ್ಲಿ ಪ್ರಸಾರವಾದಂತ ವರದಿಗಳು ಸುಳ್ಳು ಎಂಬುದಾಗಿ ಕರ್ನಾಟಕ ಲೋಕಸೇವಾ ಆಯೋಗ ಸ್ಪಷ್ಟ ಪಡಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕರ್ನಾಟಕ ಲೋಕಸೇವಾ ಆಯೋಗವು, ಆಯೋಗದ ವತಿಯಿಂದ ದಿನಾಂಕ:05-05-2025ರಂದು ನಡೆಸಲಾದ ಗಜೆಟೆಡ್ ಪ್ರೊಬೆಷನರ್ ಹುದ್ದೆಗಳ ಮುಖ್ಯ ಪರೀಕ್ಷೆಯ ಪಬಂಧ ಪತ್ರಿಕೆಯ ಪರೀಕ್ಷೆಯ ಸಂದರ್ಭದಲ್ಲಿ ಬೆಂಗಳೂರಿನ ಬಿಬಿಎಂಪಿ ಸಂಯುಕ್ತ ಪದವಿ ಪೂರ್ವ ಕಾಲೇಜು, ಕಸ್ತೂರ ಬಾ ನಗರ, ಮೈಸೂರು ರಸ್ತೆ ಇಲ್ಲಿ ನಡೆದ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಸಾಧ್ಯತೆಯ ಬಗ್ಗೆ ಕೆಲವು ಸಮೂಹ ಮಾಧ್ಯಮಗಳು ವರದಿ ಮಾಡಿವೆ ಎಂದಿದೆ.

ಈ ವಿಷಯದ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಲಾಗಿದ್ದು, ಪರೀಕ್ಷಾ ಉಪ ಕೇಂದ್ರದ ಮೇಲ್ವಿಚಾರಕರು ಮತ್ತು ಆಯೋಗದಿಂದ ನಿಯೋಜಿತರಾದ ಸ್ಥಳೀಯ ನಿರೀಕ್ಷಣಾಧಿಕಾರಿಗಳಿಂದ ವಿಸ್ತ್ರತವಾದ ವರದಿಗಳನ್ನು ಪಡೆಯಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗವು ಪ್ರೊಬೇಷನರಿ ಪರೀಕ್ಷೆಗಳೂ ಸೇರಿದಂತೆ ವಿವಿಧ ನೇಮಕಾತಿ ಪರೀಕ್ಷೆಗಳನ್ನು ನಡೆಸುವಾಗ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗದಂತೆ ಮತ್ತು ಪರೀಕ್ಷಾ ಗೌಪ್ಯತೆಯನ್ನು ಕಾಪಾಡುವ ಮತ್ತು ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವ ಸಲುವಾಗಿ ಹಾಗೂ ದುರಾಚಾರ ಪ್ರಕರಣಗಳು ನಡೆಯದಂತೆ ತಡೆಯಲು ಹಲವು ಹಂತಗಳ ಸುರಕ್ಷಾ ಕ್ರಮಗಳನ್ನು ಅಳವಡಿಸಿಕೊಳ್ಳಲಾಗಿರುತ್ತದೆ. ಅದರಂತೆಯೇ ಈ ಪರೀಕ್ಷೆಯಲ್ಲಿಯೂ ಸಹ ಪ್ರಶ್ನೆ ಪತ್ರಿಕೆಯ ಭದ್ರತೆಗಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಮೊಹರು ಮಾಡಿದ ಪೆಟ್ಟಿಗೆ, ಮೊಹರು ಮಾಡಿದ ಲೋಹದ ಟ್ರಂಕ್, ಮೊಹರು ಮಾಡಿದ ಟ್ಯಾಂಪರ್ ಎವಿಡೆಂಟ್ ಕವರ್‌ಗಳನ್ನು ಇತ್ಯಾದಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಅದರೊಂದಿಗೆ ಪ್ರಶ್ನೆಪತ್ರಿಕೆಗಳನ್ನು ಸಾಗಿಸುವಾಗ ಅವು ಹಾನಿಯಾಗದಂತೆ ಸಂರಕ್ಷಿಸಲು ನೀರು ನಿರೋಧಕ ಪ್ಲಾಸ್ಟಿಕ್‌ ಕವರ್‌ಗಳನ್ನು ದ್ರವ ಪದಾರ್ಥಗಳಿಂದ ಸುರಕ್ಷಿತವಾಗಿ ಸಂರಕ್ಷಿಸುವ ಉದ್ದೇಶಕ್ಕಾಗಿ ಮಾತ್ರ ಉಪಯೋಗಿಸಲಾಗಿದ್ದು, ಅದು ಟ್ಯಾಂಪರ್ ಎವಿಡೆಂಟ್ ಕವರ್ ಆಗಿರುವುದಿಲ್ಲ ಎಂದು ಹೇಳಿದೆ.

ಸದರಿ ಪರೀಕ್ಷೆಯ ಪರೀಕ್ಷಾ ಉಪಕೇಂದ್ರಕ್ಕೆ ವಿತರಿಸಲಾದ ಪ್ರಶ್ನೆ ಪತ್ರಿಕೆಗಳನ್ನೊಳಗೊಂಡ ಪಟ್ಟಿಗೆಗಳು, ಟ್ರಂಕ್‌ಗಳು ಮತ್ತು ಟ್ಯಾಂಪರ್ ಎವಿಡೆಂಟ್ ಕವರಳಲ್ಲಿನ ಎಲ್ಲಾ ಭದ್ರತಾ ಮೊಹರುಗಳು ಕ್ರಮಬದ್ಧವಾಗಿಯೇ ಇರುವುದು ಕಂಡುಬಂದಿರುತ್ತದೆ. ಇದನ್ನು ಅಭ್ಯರ್ಥಿಗಳು, ಉಪ-ಕೇಂದ್ರದ ಮೇಲ್ವಿಚಾರಕರು, ಸ್ಥಳೀಯ ನಿರೀಕ್ಷಣಾಧಿಕಾರಿಗಳು ಮತ್ತು ಕೊಠಡಿ ಸಂವೀಕ್ಷಕರು ಖಚಿತಪಡಿಸಿದ್ದಾರೆ. ಸದರಿ ಉಪ-ಕೇಂದ್ರಕ್ಕಾಗಿ ಕೊನೆಯ ಪದರದ ಪ್ಲಾಸ್ಟಿಕ್‌ ಕವರ್‌ಗಳಲ್ಲಿ ಅಳವಡಿಸಲಾದ ಪ್ರಶ್ನೆ ಸಹಿತ ಉತ್ತರ ಪುಸ್ತಿಕೆಗಳ ಸಂಖ್ಯೆ ಇತರ ಕೇಂದ್ರಗಳಿಗೆ ಸಾಮಾನ್ಯವಾಗಿ ವಿತರಿಸಲಾದ ಪ್ರಶ್ನೆ ಪತ್ರಿಕೆಗಳಿಗಿಂತ ದುಪ್ಪಟ್ಟಾಗಿತ್ತು ಎಂದು ತಿಳಿಸಿದೆ.

ಮೇಲೆ ತಿಳಿಸಿದ ಅಂಶಗಳ ಹಿನ್ನೆಲೆಯಲ್ಲಿ ಸದರಿ ಪ್ರಕರಣವನ್ನು ಪರಿಶೀಲಿಸಲಾಗಿ ಪ್ರಶ್ನೆಪತ್ರಿಕೆಗಳ ಗೌಪ್ಯತೆ ಮತ್ತು ಸುರಕ್ಷತೆಯನ್ನು ಕಾಪಾಡುವ ದೃಷ್ಟಿಯಿಂದ ಅವುಗಳನ್ನು ಬಹುಪದರಗಳುಳ್ಳ ಪ್ಯಾಕ್‌ನಲ್ಲಿರಿಸಿ ಮೊಹರು ಮಾಡಲಾಗಿರುತ್ತದೆ. ಹಾಗಾಗಿ, ಸದರಿ ಉಪಕೇಂದ್ರದ 2 ಕೊಠಡಿಗಳಲ್ಲಿ ಟ್ಯಾಂಪರ್ ಎವಿಡೆಂಟ್ ಎನ್ವಲಪ್ ಒಳಗಿನ ದ್ರವ ಪದಾರ್ಥಗಳಿಂದ ಸಂರಕ್ಷಿಸಲು ಪ್ಯಾಕ್ ಮಾಡಲಾಗಿದ್ದ ಪ್ಲಾಸ್ಟಿಕ್ ಕವರ್‌ಗಳು ಮಾತ್ರ ಪ್ಯಾಕಿಂಗ್ ಅಥವಾ ಸಾಗಣೆಯ ಸಮಯದಲ್ಲಿ ಯಾಂತ್ರಿಕವಾಗಿ ಹರಿದಿರಬಹುದಾದ ಸಾಧ್ಯತೆ ಇರುತ್ತದೆಯೇ ಹೊರತು ಇತರೆ ಯಾವುದೇ ರೀತಿಯ ಲೋಪಗಳುಂಟಾಗಿರುವುದಿಲ್ಲ. ಇನ್ನುಳಿದಂತೆ ಆಯೋಗವು ನಡೆಸಿದ ಇತರೆ ಯಾವುದೇ ಪರೀಕ್ಷಾ ಉಪ ಕೇಂದ್ರಗಳಿಂದ ಈ ರೀತಿಯ ಯಾವುದೇ ವರದಿಗಳು ಸ್ವೀಕೃತವಾಗಿರುವುದಿಲ್ಲ ಎಂದಿದೆ.

ಪರೀಕ್ಷಾ ಗೌಪ್ಯ ಸಾಮಗ್ರಿಗಳ ಗೌಪ್ಯತೆ, ಸುರಕ್ಷತೆ ಮತ್ತು ಭದ್ರತೆಯನ್ನು ಕಾಪಾಡುವಲ್ಲಿ ಆಯೋಗವು ಅತ್ಯಂತ ಜವಾಬ್ದಾರಿಯುತವಾಗಿ ಕಾಳಜಿ ವಹಿಸುವುದಲ್ಲದೆ, ಅತ್ಯಂತ ಪಾರದರ್ಶಕವಾಗಿ ಕಾರ್ಯನಿರ್ವಹಿಸಲು ಯತ್ನಿಸುತ್ತಿದೆ ಎಂಬ ಅಂಶವನ್ನು ಪುನರುಚ್ಚರಿಸುತ್ತಾ, ಸಾಮಾಜಿಕ ಮತ್ತು ಸಮೂಹ ಮಾಧ್ಯಮದಲ್ಲಿ ಭಿತ್ತರಗೊಳ್ಳುತ್ತಿರುವ ವಿಷಯವು ಸತ್ಯಕ್ಕೆ ದೂರವಾದುದ್ದಾಗಿದ್ದು, ಇತರ ಅಭ್ಯರ್ಥಿಗಳು ಇದರಿಂದ ಯಾವುದೇ ರೀತಿಯಲ್ಲಿಯೂ ಹತಾಶರಾಗಬಾರದೆಂದು ಮತ್ತು ಇಂತಹ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದೆಂದು ತಿಳಿಸಿದೆ.

ಭಾರತಕ್ಕೆ ನುಸುಳಲು ಯತ್ನಿಸುತ್ತಿದ್ದ ಮತ್ತೊಬ್ಬ ಪಾಕಿಸ್ತಾನಿ ಬಂಧನ

“ರೈಲು ಬೋಗಿಯಂತೆ ಮೀಸಲಾತಿ…”: ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ಮಹತ್ವದ ಹೇಳಿಕೆ…!

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ 40/60 ಅಳತೆಯ ಕಟ್ಟಡಗಳಿಗೆ `ಒಸಿ, ಸಿಸಿ’ ವಿನಾಯಿತಿ: ಇಂಧನ ಸಚಿವ ಕೆ.ಜೆ. ಜಾರ್ಜ್

18/03/2026 9:31 AM1 Min Read

ಆಸ್ತಿ ಖರೀದಿ ಒಪ್ಪಂದವಾದರೂ `ರಿಜಿಸ್ಟ್ರೇಷನ್’ ಮಾಡಿಕೊಡದಿದ್ದರೆ ಜಸ್ಟ್ ಹೀಗೆ ಮಾಡಿ !

18/03/2026 9:09 AM1 Min Read

ದೇಹದ ಉಸಿರಾಟದಿಂದ ಜೀರ್ಣಕ್ರಿಯೆಯವರೆಗೆ ಎಲ್ಲವನ್ನೂ ನಿಯಂತ್ರಿಸುತ್ತವೆ ಈ 10 ‘ಪ್ರಾಣ ವಾಯು’ಗಳು!

18/03/2026 8:52 AM2 Mins Read
Recent News

ಯುಎಇನಲ್ಲಿರುವ ಆಸ್ಟ್ರೇಲಿಯಾ ಸೇನಾ ನೆಲೆ ಮೇಲೆ ಇರಾನ್ ದಾಳಿ: ಅಲ್ ಮಿನ್ಹಾದ್ ಬಳಿ ಸ್ಫೋಟ; ಸಿಬ್ಬಂದಿ ಸುರಕ್ಷಿತ

18/03/2026 9:56 AM

BREAKING: ಇಂದೋರ್‌ನಲ್ಲಿ ಇವಿ ಚಾರ್ಜಿಂಗ್ ಪಾಯಿಂಟ್ ಸ್ಫೋಟಗೊಂಡು 6 ಮಂದಿ ದಾರುಣ ಸಾವು; ಹತ್ತಕ್ಕೂ ಹೆಚ್ಚು ಸಿಲಿಂಡರ್‌ಗಳು ಬ್ಲಾಸ್ಟ್!

18/03/2026 9:50 AM

BIG NEWS : ಭಾರತದಲ್ಲಿ ಶೇ. 40% ಪದವೀಧರರು ನಿರುದ್ಯೋಗಿಗಳು : ವರದಿ

18/03/2026 9:39 AM

NIA ಭರ್ಜರಿ ಕಾರ್ಯಾಚರಣೆ: ಮಿಜೋರಾಂ-ಮ್ಯಾನ್ಮಾರ್ ಗಡಿಯಲ್ಲಿ ವಿಧ್ವಂಸಕ ಕೃತ್ಯದ ಸಂಚು; ಅಮೆರಿಕ ಪ್ರಜೆ ಮ್ಯಾಥ್ಯೂ ವ್ಯಾನ್‌ಡೈಕ್ ಸೇರಿ 6 ಉಕ್ರೇನ್ ಪ್ರಜೆಗಳ ಬಂಧನ

18/03/2026 9:31 AM
State News
KARNATAKA

BIG NEWS : ರಾಜ್ಯದಲ್ಲಿ 40/60 ಅಳತೆಯ ಕಟ್ಟಡಗಳಿಗೆ `ಒಸಿ, ಸಿಸಿ’ ವಿನಾಯಿತಿ: ಇಂಧನ ಸಚಿವ ಕೆ.ಜೆ. ಜಾರ್ಜ್

By kannadanewsnow5718/03/2026 9:31 AM KARNATAKA 1 Min Read

ಚಿತ್ರದುರ್ಗ: ರಾಜ್ಯದಲ್ಲಿ 40/60 ಚದರ ಅಡಿ ವಿಸ್ತೀರ್ಣದ ನಿವೇಶನಗಳಲ್ಲಿ ನಿರ್ಮಿಸಿರುವ ಹೊಸ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಆಕ್ಯುಪೇಷನ್ ಸರ್ಟಿಫಿಕೇಟ್…

ಆಸ್ತಿ ಖರೀದಿ ಒಪ್ಪಂದವಾದರೂ `ರಿಜಿಸ್ಟ್ರೇಷನ್’ ಮಾಡಿಕೊಡದಿದ್ದರೆ ಜಸ್ಟ್ ಹೀಗೆ ಮಾಡಿ !

18/03/2026 9:09 AM

ದೇಹದ ಉಸಿರಾಟದಿಂದ ಜೀರ್ಣಕ್ರಿಯೆಯವರೆಗೆ ಎಲ್ಲವನ್ನೂ ನಿಯಂತ್ರಿಸುತ್ತವೆ ಈ 10 ‘ಪ್ರಾಣ ವಾಯು’ಗಳು!

18/03/2026 8:52 AM

‘LPG’ ಗ್ರಾಹಕರೇ ಗಮನಿಸಿ: ಗ್ಯಾಸ್ ಇಕೆವೈಸಿ (e-KYC) ಎಲ್ಲರಿಗೂ ಕಡ್ಡಾಯವೇ? ಇಲ್ಲಿದೆ ಅಸಲಿ ಮಾಹಿತಿ!

18/03/2026 8:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.