ಬೆಂಗಳೂರು : ಇಂದು ಬೆಂಗಳೂರಿನ ಸಂಜಯ್ ನಗರದಲ್ಲಿ ಕೆಎಎಸ್ ಅಧಿಕಾರಿ ಪತ್ನಿ ಚೈತ್ರ ಗೌಡ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೀರೆಯಿಂದ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಸೈದುಲು ಅದಾವತ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೈತ್ರಾಗೌಡ ಆತ್ಮಹತ್ಯೆ ಮಾಡಿಕೊಂಡ ಕುರಿತಂತೆ ದೂರು ಸಲ್ಲಿಕೆಯಾಗಿದೆ.ಮೃತ ಚೈತ್ರಗೌಡ ತಮ್ಮ ಆಗಮಿಸಿ, ದೂರು ನೀಡಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ.ಮನೆಯಲ್ಲಿ ಒಂದು ಡೆತ್ ನೋಟ್ ಸಹ ಪತ್ತೆಯಾಗಿದೆ ಎಂದು ಅವರು ತಿಳಿಸಿದರು.
ನನ್ನ ಸಾವಿಗೆ ಯಾರೂ ಕಾರಣ ಅಲ್ಲ ಅಂತ ಬರೆದಿದ್ದಾರೆ.ಅದನ್ನು ಅವರೇ ಬರೆದಿದ್ದಾರಾ ಅಂತ ಪರಿಶೀಲಿಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಗೆ ಮೃತ ದೇಹವನ್ನು ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಅರವಾನಿಸಲಾಗಿದೆ. ತನಿಖೆಯ ಬಳಿಕ ವಿಚಾರ ಗೊತ್ತಾಗಲಿದೆ. ಎಂದು ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಸೈದುಲ್ ಅದಾವತ್ ಪ್ರತಿಕ್ರಿಯೆ ನೀಡಿದರು.