ಬೆಂಗಳೂರು: ಇಂದು ಕರ್ನಾಟಕ ಲೋಕಸೇವಾ ಆಯೋಗದಿಂದ ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಪರೀಕ್ಷೆಗೆ ಹಾಜರಾಗುವಂತ ಅಭ್ಯರ್ಥಿಗಳು ಕಡ್ಡಾಯವಾಗಿ ಕೆಲ ನಿಯಮಗಳನ್ನು ಪಾಲಿಸುವಂತೆ ಆಯೋಗವು ಸೂಚಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆಪಿಎಸ್ಸಿಯು ಮಾಹಿತಿ ಬಿಡುಗಡೆ ಮಾಡಿದ್ದು, 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ: 27-08-2024ರಂದು ನಡೆಸುತ್ತಿದ್ದು, ಸದರಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಆಯೋಗದ ವೆಬ್‌ಸೈಟ್ http://kpsc.kar.nic.inನಿಂದ ಡೌನ್‌ಲೋಡ್ ಮಾಡಿಕೊಂಡು ತಮಗೆ ಹಂಚಿಕೆಯಾಗಿರುವ ಪರೀಕ್ಷಾ ಉಪಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗುವಂತೆ ಹಾಗೂ ಕಡ್ಡಾಯವಾಗಿ ಕೆಳಕಂಡ ಸೂಚನೆಗಳನ್ನು ಪಾಲಿಸುವಂತೆ ಈ ಮೂಲಕ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ ಎಂದಿದೆ.
1. ಅಭ್ಯರ್ಥಿಗಳು ಪರೀಕ್ಷೆ ಆರಂಭವಾಗುವುದಕ್ಕಿಂತ ಎರಡು ಗಂಟೆ ಮುಂಚಿತವಾಗಿ ಅಂದರೆ ಬೆಳಿಗ್ಗೆ 8.00 ಗಂಟೆಯೊಳಗೆ ಪರೀಕ್ಷಾ ಉಪಕೇಂದ್ರದ ಬಳಿ ಹಾಜರಿರತಕ್ಕದ್ದು.
2. ಬೆಳಗಿನ ಅಧಿವೇಶನಕ್ಕೆ 9:50ರ ನಂತರ ಮತ್ತು ಮಧ್ಯಾಹ್ನದ ಅಧಿವೇಶನಕ್ಕೆ 1:50 ರ ನಂತರ ಬರುವ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡಲಾಗುವುದಿಲ್ಲ.
3. ಅಭ್ಯರ್ಥಿಗಳು ಕಡ್ಡಾಯವಾಗಿ ತರಬೇಕಾದ ದಾಖಲೆಗಳು:-
ಅ) ಪರೀಕ್ಷೆಯ ಪ್ರವೇಶ ಪತ್ರ (Exam Admit Card), (original Identification card), Passport, PAN CARD, Voter ID, Aadhar- U.I.D., Govt.Employer Id (or) Driving Licence ಇವುಗಳಲ್ಲಿ ಯಾವುದಾದರೊಂದು ತರತಕ್ಕದ್ದು, ಇ) ಪಾಸ್‌ಪೋರ್ಟ್/ಸಾಂಪ್ ಅಳತೆಯ 2 ಭಾವ ಚಿತ್ರಗಳು (Photo).
ಈ) ಅಂಗವಿಕಲ ಅಭ್ಯರ್ಥಿಗಳು (Person With Disabilities Candidates) ನಿಗದಿತ ಅಂಗವಿಕಲ ಪ್ರಮಾಣ ಪತ್ರಗಳು, ಉ) ತಮ್ಮದೇ ಆದ ಲಿಪಿಕಾರರನ್ನು ಕರೆತರಲು ಆಯ್ಕೆ ಮಾಡಿಕೊಂಡಿರುವ 259 ಅಂಗವಿಕಲ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರದೊಂದಿಗೆ ಲಿಪಿಕಾರರ ಪ್ರವೇಶ ಪತ್ರವನ್ನು ಸಹ ಡೌನ್ ಲೋಡ್ ಮಾಡಿಕೊಳ್ಳತಕ್ಕದ್ದು.
ಸದರಿ 259 ಅಂಗವಿಕಲ ಅಭ್ಯರ್ಥಿಗಳು ತಮ್ಮದೇ ಆದ ಲಿಪಿಕಾರರನ್ನು ಕರೆತರದೇ ಇದ್ದಲ್ಲಿ ಅಂತಹ ಅಭ್ಯರ್ಥಿಗಳು ಪರೀಕ್ಷಾ ದಿನದಂದು ಪರೀಕ್ಷಾ ಉಪಕೇಂದ್ರದ ಮುಖ್ಯಸ್ಥರನ್ನು ಲಿಪಿಕಾರರ ಸಹಾಯವನ್ನು ಒದಗಿಸುವಂತೆ ಕೋರಿದ್ದಲ್ಲಿ ಸದರಿ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗುವುದು ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ತಿಳಿಸಿದ್ದಾರೆ.
Job Alert : ಭಾರತೀಯ ರೈಲ್ವೆ ಇಲಾಖೆಯಲ್ಲಿ 14,298 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | RRB Recruitment 2024