ಮಂಗಳೂರು: ರಾಜ್ಯದಲ್ಲಿ ಪೊಲೀಸರಿಂದ ಪಿಎಫ್ಐ ಕಾರ್ಯಕರ್ತರ ಮೇಲೆ ದಾಳಿ ನಡೆದಿದೆ. ಈಗಾಗಲೇ ಅನೇಕ ಪಿಎಫ್ಐ ಮತ್ತು ಎಸ್ಡಿಪಿಐ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ವಿಪಕ್ಷ ಉಪ ನಾಯಕ ಯು.ಟಿ.ಖಾದರ್, ಸಮಾಜದಲ್ಲಿ ಅಶಾಂತಿ ಮತ್ತು ದ್ವೇಷ ಸೃಷ್ಟಿಸಿದ್ರೆ ಕ್ರಮ ಆಗಬೇಕು ಎಂದಿದ್ದಾರೆ.
ಅಂತಹ ಯಾವುದೇ ಸಂಘಟನೆ ವಿರುದ್ಧ ಕ್ರಮಕ್ಕೆ ಎಲ್ಲಾ ಧರ್ಮದ ಸಹಮತ ಇದೆ. ಕಾನೂನು ಕೈಗೆತ್ತಿಕೊಳ್ಳುವವರನ್ನ ಹದ್ದುಬಸ್ತಿನಲ್ಲಿಡೋದು ಸರ್ಕಾರದ ಜವಾಬ್ದಾರಿ. ಶಾಂತಿ ಸೌಹಾರ್ದದ ವಾತಾವರಣ ಸರ್ಕಾರ ನಿರ್ಮಾಣ ಮಾಡಬೇಕು. ಯಾವುದೇ ತಾರತಮ್ಯ ಮಾಡದೇ ಸರ್ಕಾರ ಕ್ರಮ ತೆಗೆದುಕೊಳ್ಳಲಿ ಎಂದರು.
ಇನ್ನು ನಮ್ಮ ರಾಜ್ಯದಲ್ಲಿ ಧಾರ್ಮಿಕ ಗುರುಗಳು, ಉಲೇಮಾಗಳು ಈ ದಾಳಿ ಬಗ್ಗೆ ಅಪಸ್ವರ ಎತ್ತಿಲ್ಲ. ಯಾವುದೇ ಧಾರ್ಮಿಕ ಗುರುಗಳು ಈ ದಾಳಿ ಬಗ್ಗೆ ಅಪಸ್ವರ ಎತ್ತಿದ್ದಾರಾ ಎಂದು ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಪ್ರಶ್ನೆ ಮಾಡಿದ್ದಾರೆ.