ಬೆಂಗಳೂರು: ಡಿ-ಫಾರ್ಮಾ ಕೋರ್ಸ್ ಪ್ರವೇಶಕ್ಕೆ ಇದೇ ಮೊದಲ ಬಾರಿಗೆ ಕೌನ್ಸೆಲಿಂಗ್ ನಡೆಸುತ್ತಿದ್ದು ಅಭ್ಯರ್ಥಿಗಳ ರಾಂಕ್ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ ಪ್ರಕಟಿಸಿದೆ.
ಅಭ್ಯರ್ಥಿಗಳು ವೆರಿಫಿಕೇಷನ್ ಸ್ಲಿಪ್ ಡೌನ್‌ಲೋಡ್ ಮಾಡಿಕೊಂಡು, ಇಚ್ಚೆ/ಆಯ್ಕೆಗಳ ದಾಖಲಿಗೆ ಜನವರಿ 10ರಂದು ಮಧ್ಯಾಹ್ನ 3 ಗಂಟೆವರೆಗೆ ಅವಕಾಶ ನೀಡಲಾಗಿದೆ. ಅದೇ ದಿನ ಸಂಜೆ 6 ಗಂಟೆ ನಂತರ ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಅಭ್ಯರ್ಥಿಗಳು ವೆರಿಫಿಕೇಷನ್ ಸ್ಲಿಪ್ ನಲ್ಲಿ ದಾಖಲಿಸಿರುವಂತೆ ಎಲ್ಲ ಮೂಲ ದಾಖಲೆಗಳನ್ನು ಸಿದ್ಧಮಾಡಿಟ್ಟುಕೊಳ್ಳಬೇಕು. ಕಾಲೇಜು ಪ್ರವೇಶ ಸಂದರ್ಭದಲ್ಲಿ ಅವುಗಳ ಹಾಜರುಪಡಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ರಾಜ್ಯದ ‘ಬೀಡಿ ಕಾರ್ಮಿಕ’ರಿಗೆ ಸಿಹಿಸುದ್ದಿ: ‘ಕನಿಷ್ಠ ವೇತನ’ ನಿಗದಿ ಕುರಿತು ಸಚಿವ ಸಂತೋಷ್ ಲಾಡ್ ಮಹತ್ವದ ಸಭೆ
BREAKING : ಪಕ್ಕದ ಮನೆಯವರ ಮೇಲೆ ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು








