ಬೆಂಗಳೂರು: ಎಂಬಿಎ, ಎಂಸಿಎ, ಎಂಟೆಕ್, ಎಂಇ, ಎಂ.ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಸಂಜೆ ಪ್ರಕಟಿಸಿದೆ.
ಫಲಿತಾಂಶಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಇದ್ದಲ್ಲಿ ಅ.4ರಂದು ಮಧ್ಯಾಹ್ನ 1ಗಂಟೆ ಒಳಗೆ ಇ-ಮೇಲ್ (keauthority-ka@nic.in) ಮೂಲಕ ತಿಳಿಸಬಹುದು. ಬಳಿಕ ಪರಿಶೀಲಿಸಿ, ಅದೇ ದಿನ ಸಂಜೆ ವೇಳೆಗೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.