ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ( KSET-2024)ಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಪ್ರಮುಖ ದಿನಾಂಕಗಳು
ಕೆಇಎ ಬಿಡುಗಡೆ ಮಾಡಿರುವಂತ ಮಾಹಿತಿಯಂತೆ ದಿನಾಂಕ 13-07-2024ರ ಇಂದು ಅಧಿಸೂಚನೆ ಹೊರಡಿಸಲಾಗುತ್ತಿದೆ. ದಿನಾಂಕ 22-07-2024ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22-08-2024 ಆಗಿರುತ್ತದೆ.
ಇನ್ನೂ ಕೆಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳು ಶುಲ್ಕವನ್ನು ಪಾವತಿಸಲು ದಿನಾಂಕ 26-08-2024 ಕೊನೆಯ ದಿನವಾಗಿದೆ. ಕೆಸೆಟ್ ಪರೀಕ್ಷೆಯನ್ನು ದಿನಾಂಕ 24-11-2024ರಂದು ನಡೆಸಲಾಗುತ್ತದೆ ಅಂತ ತಾತ್ಕಾಲಿಕ ವೇಳಾಪಟ್ಟಿಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಕೆ ಹಾಗೂ ಶುಲ್ಕ ವಿವರದ ಮಾಹಿತಿ
ಕೆಸೆಟ್ ಪರೀಕ್ಷೆಗೆ ಕೆಇಎ ವೆಬ್ ಸೈಟ್ http://kea.kar.nic ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕೆಸೆಟ್ 2024ರ ಪರೀಕ್ಷೆಯನ್ನು 41 ವಿಷಯಗಳಲ್ಲಿ ನಡೆಸಲಾಗುತ್ತಿದೆ. ಕೆಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಹಾಗೂ ಇತರೆ ರಾಜ್ಯದ ಅಭ್ಯರ್ಥಿಗಳಿಗೆ ರೂ.1000 ಶುಲ್ಕವನ್ನು ನಿಗದಿ ಪಡಿಸಲಾಗಿದೆ. ಪ್ರವರ್ಗ-1, ಎಸ್ಸಿ, ಎಸ್ಟಿ ಹಾಗೂ ಪಿಡಬ್ಲ್ಯೂ ಮತ್ತು ತೃತೀಯ ಲಿಂಗಿಗಳಿಗೆ ರೂ.700 ಆಗಿದೆ.
ಕೆಸೆಟ್ ಪರೀಕ್ಷೆಯ ಇತರೆ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ http://kea.kar.nic ಗೆ ಭೇಟಿ ನೀಡಿ, ಅಭ್ಯರ್ಥಿಗಳು ಪಡೆಯಬಹುದಾಗಿದೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ಹೊಸದಾಗಿ ‘BMTC ಬಸ್’ ಸಂಚಾರ ಆರಂಭ
BIG NEWS: ‘ರಾಜ್ಯ ಸರ್ಕಾರ’ದಿಂದ ಮಹಾ ಎಡವಟ್ಟು: ‘ಸತ್ತ ಅಧಿಕಾರಿ’ಯನ್ನೇ ವರ್ಗಾವಣೆ