ಬೆಂಗಳೂರು: ಸಿಇಟಿ ಪರೀಕ್ಷೆಯ ವೇಳೆಯಲ್ಲಿ ಮಾರ್ಗಸೂಚಿ ಹೊರತಾಗಿಯೂ ಬ್ರಾಹ್ಮಣ ಸಮುದಾಯಕ್ಕೆ ಸೇರಿದಂತ ಅಭ್ಯರ್ಥಿಯೊಬ್ಬರಿಗೆ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳು ಜನಿವಾರ ತೆಗೆದಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಘಟನೆಯು ವಿವಾದಕ್ಕೂ ಕಾರಣವಾಗಿ ಬ್ರಾಹ್ಮಣ ಸಮುದಾಯದವರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಸಿಬ್ಬಂದಿಯ ಪರವಾಗಿ ಕ್ಷಮೆಯಾಚಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿಗಳು ಅಭ್ಯರ್ಥಿಗೆ ಜನಿವಾರ ತೆಗೆಯಬೇಕು ಎಂಬುದಾಗಿ ಹೇಳಿದ್ದು ತಪ್ಪು. ಇದನ್ನು ಕೆಇಎ ಒಪ್ಪುವುದಿಲ್ಲ. ಇಂತಹ ಯಾವುದೇ ಮಾರ್ಗಸೂಚಿಯನ್ನು ಕೆಇಎ ನೀಡಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು.
ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆದ ಘಟನೆಯ ಬಗ್ಗೆ ವಿಷಾದ ವ್ಯಕ್ತ ಪಡಿಸುತ್ತೇನೆ. ನಾನೇ ಈ ಘಟನೆಯ ಸಂಬಂಧ ಕ್ಷಮೆ ಕೇಳ್ತೀನಿ. ಮುಂದೆ ಇಂತಹ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗುತ್ತದೆ. ಜೊತೆಗೆ ಮಾರ್ಗಸೂಚಿಯಲ್ಲೂ ಪ್ರಕಟ ಮಾಡುವುದಾಗಿ ತಿಳಿಸಿದರು.
ನಾವು ಯಾವುದೇ ಜಾತಿ, ಧರ್ಮದ ವಿರುದ್ಧ ಮಾರ್ಗಸೂಚಿ ಪ್ರಕಟಿಸಿಲ್ಲ. ಈಗ ತಪ್ಪು ಆಗಿದೆ. ಮುಂದೆ ಇಂತಹ ತಪ್ಪು ಆಗದಂತೆ ಕ್ರಮ ಕೈಗೊಳ್ಳುತ್ತೇವೆ. ಈ ವಿಷಯವನ್ನು ಮತ್ತಷ್ಟು ದೊಡ್ಡದು ಮಾಡೋದು ಬೇಡ ಎಂಬುದಾಗಿ ಹೇಳಿದರು.
ಪೋಷಕರೇ ಗಮನಿಸಿ : ಕೇಂದ್ರೀಯ ವಿದ್ಯಾಲಯ 2ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ