ಬೆಂಗಳೂರು: ಪ್ರಸಕ್ತ ಸಾಲಿನ ಡಿಸಿಇಟಿ ಮೂರು ಹಾಗೂ ಅಂತಿಮ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಪ್ರಕಟಿಸಿದೆ.
ಆ.25ರಿಂದ 27ರವರೆಗೆ ಚಲನ್ ಡೌನ್‌ಲೋಡ್ ಮಾಡಿಕೊಂಡು, ಆ.28ರೊಳಗೆ ಶುಲ್ಕ ಪಾವತಿಸುವುದು. ಕಾಷನ್ ಡೆಪಾಸಿಟ್ ಕಟ್ಟಿದವರ ಹಣವನ್ನು ಶುಲ್ಕದ ಜತೆ ಹೊಂದಾಣಿಕೆ ಮಾಡಿಕೊಳ್ಳಲಾಗುವುದು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸೀಟು ಖಾತರಿ ಚೀಟಿಯನ್ನು ಆ.29ರೊಳಗೆ ಡೌನ್‌ಲೋಡ್ ಮಾಡಿಕೊಂಡು ಆ.30ರೊಳಗೆ ಸಂಬಂಧಪಟ್ಟ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ವಿವರಿಸಿದ್ದಾರೆ.
ಕೊನೆ ಸುತ್ತಿನಲ್ಲಿ ಒಟ್ಟು 860 ಮಂದಿಗೆ ವಿವಿಧ ವಿಭಾಗಗಳಿಗೆ ಸೀಟು ಹಂಚಿಕೆ ಮಾಡಲಾಗಿದೆ ಎಂದು ಅವರು ವಿವರಿಸಿದ್ದಾರೆ.
ನಾಳೆ ಬೆಂಗಳೂರು ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut