ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಇತ್ತೀಚೆಗೆ ನಡೆಸಲಾದಂತ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ನೇಮಕಾತಿಗೆ ನಡೆದಂತ ಸ್ಪರ್ಧಾತ್ಮಕ ಪರೀಕ್ಷೆಯ ಕೀ-ಉತ್ತರವನ್ನು ಪ್ರಕಟಿಸಲಾಗಿದೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು, ತಾಂತ್ರಿಕ ಶಿಕ್ಷಣ, ಬಿಡಿಎ, ಬೆಂಗಳೂರು ಜಲಮಂಡಳಿ, ಕೆಎಸ್ ಡಿಎಲ್, ಕೃಷಿ ಮಾರಾಟ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಜನವರಿ 10 ಮತ್ತು 11ರಂದು ನಡೆಸಿದ ಪರೀಕ್ಷೆಗಳ ಕೀ ಉತ್ತರಗಳನ್ನು KEA ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ ಎಂದಿದ್ದಾರೆ.
ಕೆಇಎ ಪ್ರಕಟಿಸಿರುವಂತ ಕೀ-ಉತ್ತರಗಳ ಬಗ್ಗೆ ಏನೇ ಆಕ್ಷೇಪಣೆಗಳು ಇದ್ದಲ್ಲಿ ಜನವರಿ 14ರಂದು ಬೆಳಿಗ್ಗೆ 11 ಗಂಟೆ ಒಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬೇಕು. ಬಳಿಕ ಪರಿಶೀಲಿಸಿ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂಬುದಾಗಿ ಹೇಳಿದ್ದಾರೆ.
#KEArecruitment: ತಾಂತ್ರಿಕ ಶಿಕ್ಷಣ, ಬಿಡಿಎ, ಬೆಂಗಳೂರು ಜಲಮಂಡಳಿ, ಕೆಎಸ್ ಡಿಎಲ್, ಕೃಷಿ ಮಾರಾಟ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಜನವರಿ 10 ಮತ್ತು 11ರಂದು ನಡೆಸಿದ ಪರೀಕ್ಷೆಗಳ ಕೀ ಉತ್ತರಗಳನ್ನು #KEA ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.
ಈ ಬಗ್ಗೆ ಏನೇ ಆಕ್ಷೇಪಣೆಗಳು ಇದ್ದಲ್ಲಿ ಜನವರಿ 14ರಂದು…
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) January 12, 2026








