ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವ ಹಾಗೂ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಮಾರ್ಚ್ 7ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ತಿಳಿಸಿದ್ದಾರೆ.
ಇದುವರೆಗೆ ಒಟ್ಟು 3.47 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 3.36 ಲಕ್ಷ ಮಂದಿ ನಿಗದಿತ ಶುಲ್ಕ ಪಾವತಿ ಮಾಡಿದ್ದಾರೆ. ಇನ್ನೂ 9 ಸಾವಿರ ಮಂದಿ ಶುಲ್ಕ ಪಾವತಿಸಬೇಕಿದ್ದು, ಅವರಿಗೆ ಅನುಕೂಲ ಆಗಲೆಂದು ದಿನಾಂಕ ವಿಸ್ತರಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.
ನೇಮಕಾತಿ: ಅಂಕಪಟ್ಟಿ ಪ್ರಕಟ
ಕಲ್ಯಾಣ ಕರ್ನಾಟಕ ವೃಂದದ ವಿವಿಧ ಹುದ್ದೆಗಳಿಗೆ ಫೆ.21 ಮತ್ತು 22ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆದಿದ್ದು, ಅವುಗಳ ಅಂತಿಮ ಕೀ ಉತ್ತರ ಹಾಗೂ ಅಭ್ಯರ್ಥಿಗಳು ಗಳಿಸಿದ ಅಂಕಗಳ ತಾತ್ಕಾಲಿಕ ಪಟ್ಟಿ ಯನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ಗದ್ಯಾಳ ಅವರು ತಿಳಿಸಿದ್ದಾರೆ.
ಅಂಕ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಮಾ.6ರಂದು ಬೆಳಿಗ್ಗೆ 11 ಗಂಟೆ ಒಳಗೆ ಆನ್ ಲೈನ್ ಮೂಲಕ ಸಲ್ಲಿಸಬೇಕು ಎಂದೂ ಅವರು ವಿವರಿಸಿದ್ದಾರೆ.
ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಬದ್ಧತೆಯೇ ಇಲ್ಲ: ಛಲವಾದಿ ನಾರಾಯಣಸ್ವಾಮಿ ಕಿಡಿ
SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!








