ಬೆಂಗಳೂರು: 402 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆ, 1000 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ತಾತ್ಕಾಲಿಕ ವೇಳಾಪಟ್ಟಿಯನ್ನು ಕೆಇಎ ಪ್ರಕಟಿಸಿದೆ.
ಇಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿದಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, PSI (402 ಹುದ್ದೆ), VAO (1000) ಸೇರಿದಂತೆ ಇತರ ಪರೀಕ್ಷೆಗಳ ತಾತ್ಕಾಲಿಕ ವೇಳಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ದಿನಾಂಕಗಳನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಗಳಿಗೆ ಸಿದ್ಧತೆಗಳನ್ನು ಮಾಡಿಕೊಳ್ಳಬಹುದು ಎಂದು ಕೆಇಎ ಇ.ಡಿ ಹೆಚ್ ಪ್ರಸನ್ನ ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಹಾಯ ಲೆಕ್ಕಿಗ, ಸಹಾಯಕ ಸಂಚಾರ ನಿರೀಕ್ಷಕ, ಕ.ರಾ.ಸಾ ಪೇದೆ, ಕುಶಲಕರ್ಮಿ, ತಾಂತ್ರಿಕ ಸಹಾಯಕರ 36 ಹುದ್ದೆಗಳಿಗೆ ದಿನಾಂಕ 12-07-2024, 13-07-2024 ಮತ್ತು ದಿನಾಂಕ 14-07-2024ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಬಿಎಂಟಿಸಿಯ 1000 ನಿರ್ವಾಹಕ ದರ್ಜೆ-3, ಮೇಲ್ವಿಚಾರಕೇತರ ಹುದ್ದೆಗಳಿಗೆ ದಿನಾಂಕ 01-09-2024ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. 402 ಪಿಎಸ್ಐ ಹುದ್ದೆಗಳಿಗೆ ದಿನಾಂಕ 22-09-2024ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ನಿಗದಿ ಪಡಿಸಿದ್ದರೇ, ಕಂದಾಯ ಇಲಾಖೆಯ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ದಿನಾಂಕ 27-10-2024ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ತಾತ್ಕಾಲಿಕ ದಿನಾಂಕ ಪ್ರಕಟಿಸಲಾಗಿದೆ.
ಬೆಂಗಳೂರಿನ KSRTC ಕೇಂದ್ರ ಕಚೇರಿಗೆ ಉತ್ತರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆ ಹೆಚ್ಚುವರಿ MD, ಅಧಿಕಾರಿಗಳ ತಂಡ ಭೇಟಿ
BREAKING: ‘BBMP ಮುಖ್ಯ ಆಯುಕ್ತ’ರ ಹೆಸರಲ್ಲಿ ‘ಮೆಸೇಜ್’: ‘FIR’ ದಾಖಲು