ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಪದವಿ ಕೋರ್ಸ್ ಗಳ ಎರಡನೇ ಸುತ್ತು ಹಾಗೂ ಆಯುಷ್ ಕೋರ್ಸ್ ಗಳ ಮೂರನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ರಾತ್ರಿ ಪ್ರಕಟಿಸಿದೆ.
ಫಲಿತಾಂಶ ಕುರಿತು ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಸೆ.21ರಂದು ಸಂಜೆ 5 ಗಂಟೆ ಒಳಗೆ ಇ-ಮೇಲ್ (keauthority-ka@nic.in) ಮೂಲಕ ಸಲ್ಲಿಸಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಹಾಗೆಯೇ ಅಖಿಲ ಭಾರತ ಮಟ್ಟದಲ್ಲಿ ಸೀಟು ಹಂಚಿಕೆಯಾಗಿದ್ದರೆ ಅಂತಹವರಿಗೂ ಹೊರ ಹೋಗುವುದಕ್ಕೆ ಅವಕಾಶ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
19 ವರ್ಷದ ಯುವಕನನ್ನು ಮದುವೆಯಾದ 19 ವರ್ಷದ ಯುವತಿ ವಿರುದ್ಧ ಕೇಸ್ ದಾಖಲು