ನವದೆಹಲಿ:ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಬಂಧನದ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಅಂತಿಮ ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ಮುಂದೆ ಪಟ್ಟಿ ಮಾಡಲಾಗಿದೆ.
ಈ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಜೂನ್ 1 ರವರೆಗೆ ಜಾಮೀನು ನೀಡಲಾಗಿದೆ.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಈ ಪ್ರಕರಣದ ವಿಚಾರಣೆ ನಡೆಸಲಿದ್ದಾರೆ.