ಬೆಂಗಳೂರು: ಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಮಾಡಿರುವಂತ ಆರೋಪದಲ್ಲಿ ಯಾವುದೇ ಉರುಳಿಲ್ಲ. ಅವರ ಬಳಿಯಲ್ಲಿ ದಾಖಲೆಗಳಿದ್ದರೇ 7 ದಿನಗಳೊಳಗೆ ಲೋಕಾಯುಕ್ತಕ್ಕೆ ದೂರು ನೀಡಬೇಕು. ಇಲ್ಲವಾದಲ್ಲಿ ಅವರ ವಿರುದ್ಧ ಮಾನನಷ್ಟ ಮೊಕದ್ದಮ್ಮೆ ಹಾಗೂ ಕ್ರಿಮಿನಲ್ ಕೇಸ್ ದಾಖಲಿಸೋದಾಗಿ ತೋಟಗಾರಿಕೆ ಸಚಿವ ಮುನಿರತ್ನ ( Minister Munirathna ) ಖಡಕ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಅವರು, ಗುತ್ತಿಗೆಯಲ್ಲಿ ಕಮೀಷನ್ ಪಡೆದಿರೋ ಆರೋಪ ಹಾಗೂ ಬೆದರಿಕೆ ಮಾಡಿರೋದೆಲ್ಲಾ ಸುಳ್ಳಾಗಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿರುವಂತ ಆರೋಪಗಳೆಲ್ಲ ಸುಳ್ಳು. ಅವರು ಕಾಂಗ್ರೆಸ್ ಏಜೆಂಟ್ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂಬುದಾಗಿ ಕಿಡಿಕಾರಿದರು.
ಕೆಂಪಣ್ಣ ಮಾಡಿದಂತ ಆರೋಪಗಳ ಸಂಬಂಧ 7 ದಿನಗಳಲ್ಲಿ ಲೋಕಾಯುಕ್ತಕ್ಕೆ ದೂರು ನೀಡಬೇಕು. ಇಲ್ಲವೇ ಆರೋಪದ ಬಗ್ಗೆ ಬಹಿರಂಗವಾಗಿ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಕೆಂಪಣ್ಣ ಸೇರಿದಂತೆ ಗುತ್ತಿಗೆದಾರರ ಸಂಘದ ಸದಸ್ಯರೆಲ್ಲರ ವಿರುದ್ಧ ಮಾನನಷ್ಟ ಮೊಕದ್ದಮ್ಮೆ ಹಾಗೂ ಕ್ರಿಮಿನಲ್ ಕೇಸ್ ದಾಖಲಿಸೋದಾಗಿ ಎಚ್ಚರಿಕೆ ನೀಡಿದ್ದಾರೆ.