ಬೆಂಗಳೂರು: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ( Kempegowda International Airport ) ಬಳಿಯಲ್ಲಿ ಕೆಂಪೇಗೌಡ ಕಂಚಿನ ಪ್ರತಿಮೆಯನ್ನು ( Kempegowda Bronze Statue ) ನಿರ್ಮಾಣ ಮಾಡಲಾಗಿದೆ. ಈ ಪ್ರತಿಮೆಯು ಉದ್ಘಾಟನೆಗೂ ಮುನ್ನವೇ ಹೊಸ ದಾಖಲೆಯನ್ನು ಬರೆದಿದೆ. ಅದೇ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಸೇರ್ಪಡೆಗೊಂಡಿದೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಸಿಎಂ ಬಸವರಾಜ ಬೊಮ್ಮಾಯಿ ಅವರು, ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ “ಪ್ರಗತಿಯ ಪ್ರತಿಮೆ”ಯು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಅನುಸಾರ ಮೊದಲ ಹಾಗೂ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂಬುದು ನಮಗೆ ಹೆಮ್ಮೆಯ ವಿಷಯ.108 ಅಡಿಯ ಈ ಪ್ರತಿಮೆ ಕೆಂಪೇಗೌಡರ ದೂರದೃಷ್ಟಿಯ ಬೆಂಗಳೂರನ್ನು ಬಿಂಬಿಸುತ್ತದೆ ಎಂದಿದ್ದಾರೆ.
ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ "ಪ್ರಗತಿಯ ಪ್ರತಿಮೆ"ಯು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಅನುಸಾರ ಮೊದಲ ಹಾಗೂ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂಬುದು ನಮಗೆ ಹೆಮ್ಮೆಯ ವಿಷಯ.108 ಅಡಿಯ ಈ ಪ್ರತಿಮೆ ಕೆಂಪೇಗೌಡರ ದೂರದೃಷ್ಟಿಯ ಬೆಂಗಳೂರನ್ನು ಬಿಂಬಿಸುತ್ತದೆ.#ಪ್ರಗತಿಯಪ್ರತಿಮೆ #ಬನ್ನಿನಾಡಕಟ್ಟೋಣ pic.twitter.com/sFERth0Xwv
— Basavaraj S Bommai (@BSBommai) November 9, 2022
ಅಂದಹಾಗೇ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಲ್ಲಿ ನಿರ್ಮಿಸಿರುವಂತ ಕೆಂಪೇಗೌಡ ಕಂಚಿನ ಪ್ರತಿಮೆಯನ್ನು ನವೆಂಬರ್ 11, 2022ರಂದು ಪ್ರಧಾನಿ ನರೇಂದ್ರ ಮೋದಿಯವರು ಅನಾವರಣಗೊಳಿಸಲಿದ್ದಾರೆ. ಇದಕ್ಕಾಗಿ ರಾಜ್ಯ ಸರ್ಕಾರದಿಂದ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಅಲ್ಲದೇ ಪಿಎಂ ಮೋದಿ ಕಾರ್ಯಕ್ರಮಕ್ಕಾಗಿ ವಿಮಾನ ನಿಲ್ದಾಣವನ್ನು ಜಗಮಗಿಸುವಂತೆ ಸಿಂಗರಿಸಲಾಗಿದೆ.