ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11 ರಂದು ಬೆಂಗಳೂರಿಗೆ ಆಗಮಿಸಲಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.
ಈ ಹಿನ್ನೆಲೆ ಬೆಂಗಳೂರಿನಲ್ಲಿ ಇಂದು ಪ್ರಾತ್ಯಕ್ಷಿತೆ ಕಾರ್ಯ ನಡೆಯಲಿದೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಪ್ರಾತ್ಯಕ್ಷಿತೆ ನಡೆಯಲಿದೆ. ಇಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಸ್ ರೆನ್ಸ್ ಮೂಲಕ ಪ್ರಧಾನಿ ಮೋದಿ ಜೊತೆ ಸಿಎಂ ಬೊಮ್ಮಾಯಿ ಚರ್ಚೆ ನಡೆಸಲಿದ್ದಾರೆ.
ನವೆಂಬರ್ 11 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 2 ನೇ ಟರ್ಮಿನಲ್ ನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಅಲ್ಲದೇ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಮೋದಿ ಬೆಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆ ರಾಜ್ಯ ಬಿಜೆಪಿ ಈಗಾಗಲೇ ಭರ್ಜರಿ ಸಿದ್ದತೆ ನಡೆಸಿದೆ.
E-Textil : ಇನ್ಮುಂದೆ ನಿಮ್ಮ ಬಟ್ಟೆ ಮೂಲಕ ಕೂಡ ಆಗಲಿದೆ ಸ್ಮಾರ್ಟ್ ಫೋನ್ ಚಾರ್ಜ್, ಇಲ್ಲಿದೆ ಮಾಹಿತಿ
BIGG NEWS : ಪ್ರತಿ ಟನ್ ಕಬ್ಬಿಗೆ 5500 ರೂ.ನಿಗದಿಗೆ ಒತ್ತಾಯಿಸಿ ರೈತರಿಂದ ಇಂದು ‘ಹೆದ್ದಾರಿ ಬಂದ್’ |Farmer Protest
ಬೀದರ್ ಜನತೆಗೆ ಸಿಹಿಸುದ್ದಿ: ತಿರುಪತಿಗೆ ವಿಶೇಷ ರೈಲು ಸಂಚಾರ, ಇಲ್ಲಿದೆ ವೇಳಾಪಟ್ಟಿ