ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11 ರಂದು ಬೆಂಗಳೂರಿಗೆ ಆಗಮಿಸಲಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.
ಈ ಹಿನ್ನೆಲೆ ಬಿಜೆಪಿ ಕಚೇರಿಯಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಾಳೆ ಸಭೆ ನಡೆಸಲಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ , ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಪ್ರತಿಮೆ ಲೋಕಾರ್ಪಣೆ ಕುರಿತು ಬಿಜೆಪಿ ಪೂರ್ವಭಾವಿ ಸಭೆ ನಡೆಸಲಿದೆ. ಮೋದಿ ಕಾರ್ಯಕ್ರಮದ ರೂಪು ರೇಷೆ, ಸಿದ್ದತೆ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ನಿರ್ಮಿಸಲಾಗಿದ್ದು, ಲೋಕಾರ್ಪಣೆ ಕಾರ್ಯಕ್ರಮದ ಸಿದ್ಧತೆ ಕೆಲಸ ಭರದಿಂದ ನಡೆಯುತ್ತಿದೆ.
ಬಂಡವಾಳ ಹೂಡಿಕೆಗಳ ಒಪ್ಫಂದಗಳು ಕಾರ್ಯಗತಗೊಳ್ಳಲು ಸರ್ಕಾರ ಎಲ್ಲ ಸಹಕಾರ – ಸಿಎಂ ಬೊಮ್ಮಾಯಿ