ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ನಿಲಾದ್ರಿ ನಗರದಲ್ಲಿ ಗುರುವಾರ ರಾತ್ರಿ ಕೇರಳ ಮೂಲದ ಯುವತಿಯ ಮೇಲೆ ಇಬ್ಬರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅತ್ಯಾಚಾರಕ್ಕೆ ಸಹಕರಿಸಿದ ಆತನ ಸ್ನೇಹಿತೆಯನ್ನೂ ಸೇರಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಿಜೆಪಿಯಿಂದ ‘ರೌಡಿ ಮೋರ್ಚಾ’ ಘಟಕ ಆರಂಭದ ಲಕ್ಷಣ : ಟ್ವೀಟ್ ನಲ್ಲಿ ಕಾಂಗ್ರೆಸ್ ವ್ಯಂಗ್ಯ
ಬಿಟಿಎಂ ಲೇಔಟ್ನ ಸಂಸ್ಥೆಯೊಂದರಲ್ಲಿ ಫ್ರೀಲ್ಯಾನ್ಸರ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಗುರುವಾರ ರಾತ್ರಿ ಬಿಟಿಎಂ ಲೇಔಟ್ನಿಂದ ನಿಲಾದ್ರಿ ನಗರಕ್ಕೆ ಖಾಸಗಿ ಕಂಪನಿಯೊಂದರ ಬೈಕ್ ಬುಕ್ ಮಾಡಿದ್ದಳು. ಬೈಕ್ ಹುಡುಗ ಪಿಕ್ ಮಾಡಲು ಬಂದಾಗ ಯುವತಿ ಮದ್ಯಪಾನ ಮಾಡಿದ್ದಳು. ನಿಲಾದ್ರಿ ನಗರಕ್ಕೆ ತಲುಪುವ ಹೊತ್ತಿಗೆ ಯುವತಿ ಅರೆ ಪ್ರಜ್ಞಾವಸ್ಥೆಯಲ್ಲಿ ಇದ್ದಳು ಎಂದು ತಿಳಿದುಬಂದಿದೆ.
ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿಯನ್ನು ಡ್ರಾಪ್ ಪಾಯಿಂಟ್ಗೆ ತಲುಪಿಸದೆ ಬೈಕ್ನಲ್ಲಿದ್ದ ಯುವಕ ತನ್ನ ಸ್ನೇಹಿತ ಹಾಗೂ ಸ್ನೇಹಿತೆಯ ನೆರವಿನಿಂದ ನಿಲಾದ್ರಿ ನಗರದ ತನ್ನ ರೂಮ್ಗೆ ಕರೆದೊಯ್ದು ಇಬ್ಬರು ಅತ್ಯಾಚಾರ ಮಾಡಿದ್ದಾರೆ. ಪ್ರಜ್ಞೆ ಬಂದ ಬಳಿಕ ಯುವತಿಯನ್ನು ಆರೋಪಿಗಳು ಬಿಟ್ಟು ಕಳುಹಿಸಿದ್ದಾರೆ. ಜತೆಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.
ಬಿಜೆಪಿಯಿಂದ ‘ರೌಡಿ ಮೋರ್ಚಾ’ ಘಟಕ ಆರಂಭದ ಲಕ್ಷಣ : ಟ್ವೀಟ್ ನಲ್ಲಿ ಕಾಂಗ್ರೆಸ್ ವ್ಯಂಗ್ಯ
ಘಟನೆ ಬಳಿಕ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ನೀಡಿದ್ದರು. ಈ ದೂರು ಆಧರಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.