ಕೊಲ್ಲಂ (ಕೇರಳ): ರಾಜ್ಯದ ಕೊಲ್ಲಂ ಜಿಲ್ಲೆಯಲ್ಲಿ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಗೆ (NEET) ಹಾಜರಾಗುವ ಮೊದಲು ವಿದ್ಯಾರ್ಥಿನಿಯೊಬ್ಬಳ ಒಳಉಡುಪುಗಳನ್ನು ತೆಗೆಯುವಂತೆ ಹೇಳಿದ ಘಟನೆಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಮಂಗಳವಾರ ಈ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಜುಲೈ 18 ರಂದು ಪದವಿಪೂರ್ವ ವೈದ್ಯಕೀಯ ಕೋರ್ಸ್ಗಳ ನೀಟ್ ಪರೀಕ್ಷೆಯಲ್ಲಿ ಯುವತಿಯರಿಗೆ ಒಳುಡುಪು ತೆಗೆಯುವಂತೆ ಒತ್ತಾಯಿಸಲಾಗಿತ್ತು ಎಂದು ವಿದ್ಯಾರ್ಥಿನಿಯೊಬ್ಬಳು ನೀಡಿದ ದೂರಿನ ನಂತ್ರ ಘಟನೆ ಬೆಳಕಿಗೆ ಬಂದಿದೆ.