ಬಾಗಲಕೋಟೆ : ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಹಿಂದೂ ಕಾರ್ಯಕರ್ತರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಸಿಪಿಐ ಕರೆಪ್ಪ ಬನ್ನೆ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಬಾಗಲಕೋಟೆ ಎಸ್ ಪಿ ಜಯಪ್ರಕಾಶ್ ಈ ಆದೇಶ ಹೊರಡಿಸಿದ್ದಾರೆ.
ಘಟನೆ ಹಿನ್ನೆಲೆ
ಸೆ. 6 ರಂದು ಗಣಪತಿ ಮೆರವಣಿಗೆ ವೇಳೆ ಸಿಪಿಐ, ಇಬ್ಬರು ಕಾನ್ಸ್ಟೇಬಲ್ಗಳ ಮೇಲೆ ಹಲ್ಲೆ ಮಾಡಿದ್ದು, ಕೆರೂರು ಠಾಣೆ ಕಾನ್ಸ್ಟೇಬಲ್ ಸುರೇಶ್, ರಮೇಶ್ ಮೇಲೆ ಹಲ್ಲೆ ಮಾಡಲಾಗಿದೆ. ಬೇಗ ಗಣೇಶ ಮೆರವಣಿ ಸಾಗಿಸಿ ಎಂದು ಹೇಳಿದ್ದಕ್ಕೆ ಸಿಪಿಐ ಸೇರಿದಂತೆ ಇಬ್ಬರು ಕಾನ್ಸ್ಟೇಬಲ್ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಹೇಳಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದರು.
ನಂತರ ಸಿಪಿಐ ಕರೆಪ್ಪ ಬನ್ನೆ ಈ ಆರು ಮಂದಿಗೆ ಜೈಲಿನಲ್ಲಿ ಟಾರ್ಚರ್ ನೀಡಿದ್ದರು ಎಂದು ಹಿಂದೂ ಜಾಗರಣಾ ವೇದಿಕೆ ಕೆರೂರು ಚಲೋ ಪ್ರತಿಭಟನೆ ನಡೆಸಿದ್ದರು. ಸುಳ್ಳು ಕೇಸ್ ದಾಖಲಿಸಿದ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಬಾಗಲಕೋಟೆ ಎಸ್ ಪಿ ಜಯಪ್ರಕಾಶ್ ಸಿಪಿಐ ಕರೆಪ್ಪ ಬನ್ನೆ ಅವರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.