ಬೆಂಗಳೂರು: ಇನ್ನೇನು ಹೊಸ ವರ್ಷಕ್ಕೆ ಕ್ಷಣಗಣ ಶುರುವಾಗಿದೆ. ಎರಡು ವರ್ಷಗಳ ಬಳಿಕ ಈ ಬಾರಿ ಹೊಸ ವರ್ಷಾಚರಣೆಗೆ ಅದ್ಧೂರಿ ಸಿದ್ಧತೆ ಮಾಡಲಾಗಿದೆ.
BIGG NEWS: ಹಿಂದೂಗಳನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನ; ಆಂಧ್ರದ ಮೂವರ ವಿರುದ್ಧ ಎಫ್ಐಆರ್
ಕೊರೊನಾ ಆತಂಕ ನಡುವೆಯೇ ಹೊಸ ವರ್ಷಾಚರಣೆಗೆ ರೆಡಿಯಾಗಿದ್ದಾರೆ. ಬೆಂಗಳೂರಿನ ಹೊಸ ವರ್ಷಾಚರಣೆಗೆ ಖಾಕಿ ಫುಲ್ ಅಲರ್ಟ್ ಆಗಿದೆ. ಹೊಸ ವರ್ಷಕ್ಕೆ ಬೆಂಗಳೂರಿನಲ್ಲಿ 8,500 ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯಕ್ತ ಪ್ರತಾಪ್ ರೆಡ್ಡಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು , ಪಬ್ , ಭಾರ್, ರೆಸ್ಟೋರೆಂಟ್ ಗಳ ಮಾಲೀಕರು ನಿಯಮ ಪಾಲಿಸಬೇಕು. ಎಲ್ಲರೂ ಹೊಸ ವರ್ಷ ಆಚರಣೆಗೆ ಬರುವವರು ಮಾಸ್ಕ್ ಕಡ್ಡಾಯವಾಗಿ ಹಾಕಿಕೊಳ್ಳಲೇಬೇಕು ಎಂದರು.ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದರು .