ಬೆಂಗಳೂರು: ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವಿರುದ್ಧ ಮತ್ತೊಮ್ಮೆ ಪೋಲಿಸರು ಸಮರ ಸಾರಿದ್ದು, ಪ್ರಾಥಮಿಕ ಮೂಲಗಳ ಪ್ರಕಾರ, ಕರ್ನಾಟಕ ಮತ್ತು ದೆಹಲಿಯ ಶಾಹೀನ್ ಬಾಗ್ ಸೇರಿದಂತೆ 8 ರಾಜ್ಯಗಳಲ್ಲಿ ಪಿಎಫ್ಐನ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ.
ಸುಮಾರು ೪೫ ಕ್ಕೂ ಹೆಚ್ಚು ಕಡೆ ಪೊಲೀಸರು ದಾಳಿ ನಡೆಸಿದ್ದು, ನಡೆಸಿದ್ದಾರೆ. ಸುಮಾರು 40ಕ್ಕೂ ಹೆಚ್ಚು ಮುಖಂಡರನ್ನ ವಶಕ್ಕೆ ಪಡೆದಿದ್ದಾರೆ.ಬಾಗಲಕೋಟೆ, ಬೀದರ್, ಚಾಮರಾಜನಗರ, ಚಿತ್ರದುರ್ಗ, ರಾಮನಗರ, ಮಂಗಳೂರು, ಕೊಪ್ಪಳ, ಬಳ್ಳಾರಿ, ಕೋಲಾರ, ಬೆಂಗಳೂರು ಗ್ರಾ., ಮೈಸೂರು, ವಿಜಯಪುರ ಸೇರಿದಂತೆ ರಾಜ್ಯಾದ್ಯಂತ ಪಿಎಫ್ಐ ಮುಖಂಡರ ಮನೆ ಮೇಲೆ ದಾಳಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ PFI ಮುಖಂಡರ ಮೇಲೆ ಪೊಲೀಸರ ದಾಳಿ ನಡೆಸಿದ್ದಾರೆ. ಈ ವೇಳೆ 7 ಜನ ಪಿಎಫ್ಐ ಹಾಗೂ ಎಸ್ಡಿಪಿಐ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.ಇದೀಗ 7 ಜನ ಪಿಎಫ್ಐ ಹಾಗೂ ಎಸ್ಡಿಪಿಐ ಕಾರ್ಯಕರ್ತರನ್ನು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ತಹಸೀಲ್ದಾರ್ ಆದೇಶದ ಮೇರೆಗೆ 7 ಮಂದಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.