ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ರಾಜೀವ್ ಶುಕ್ಲಾ ಅವರನ್ನು ಖಾಯಂ ಆಹ್ವಾನಿತರನ್ನಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ನೇಮಕ ಮಾಡಿದ್ದಾರೆ.
ಶುಕ್ಲಾ ಅವರು ಪಕ್ಷದ ಹಿಮಾಚಲ ಪ್ರದೇಶ ಮತ್ತು ಚಂಡೀಗಢದ ಉಸ್ತುವಾರಿಯಾಗಿದ್ದರು ಆದರೆ ಇತ್ತೀಚೆಗೆ ಅವರನ್ನು ಬದಲಾಯಿಸಲಾಯಿತು.
“ಕಾಂಗ್ರೆಸ್ ಅಧ್ಯಕ್ಷರು ರಾಜೀವ್ ಶುಕ್ಲಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಖಾಯಂ ಆಹ್ವಾನಿತರಾಗಿ ನೇಮಕ ಮಾಡಿದ್ದಾರೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ