ಬೆಳಗಾವಿ : ಸದ್ಯಕ್ಕೆ ರಾಜಕಾರಣದಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಸಿದ್ದರಾಮಯ್ಯರ 5 ವರ್ಷ ಸಿಎಂ ಎನ್ನುವ ಹೇಳಿಕೆಗೆ ಕಾಂಗ್ರೆಸ್ ನಾಯಕರೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಇದರ ಮಧ್ಯ ಸಚಿವ ಭೈರತಿ ಸುರೇಶ್ ‘King is Alive’ ಸಿಎಂ ಸಿದ್ದರಾಮಯ್ಯನವರೇ ನಮ್ಮ ನಾಯಕ ಎಂದು ಹೇಳಿಕೆ ನೀಡಿದ್ದಾರೆ.
ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಭೈರತಿ ಸುರೇಶ್, ಮುಂದಿನ ನಾಯಕತ್ವದ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಮುಂದಿನ ನಾಯಕತ್ವದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ನಿರ್ಧರಿಸುತ್ತಾರೆ ಇಲ್ಲದಿದ್ದರೆ ಹೈಕಮಾಂಡ್ ಈ ವಿಚಾರವಾಗಿ ತೀರ್ಮಾನ ಮಾಡುತ್ತದೆ ಎಂದು ಸಚಿವ ಭೈರತಿ ಸುರೇಶ್ ಹೇಳಿಕೆ ನೀಡಿದರು.
ಮುಂದಿನ ನಾಯಕನ ಕುರಿತು ಯಾವುದೇ ಚರ್ಚೆ ಇಲ್ಲ ಸಿದ್ದರಾಮಯ್ಯ ನಮ್ಮ ಲೀಡರ್ ಅವರೇ ಮುಂದೆ ಯಾರು ನಾಯಕರು ಆಗುತ್ತಾರೆ ಎನ್ನುವುದು ತೀರ್ಮಾನ ಮಾಡುತ್ತಾರೆ ಅಥವಾ ಹೈಕಮಾಂಡ್ ಮುಂದಿನ ನಾಯಕ ಯಾರು ಎಂದು ತೀರ್ಮಾನ ಮಾಡುತ್ತಾರೆ. ಎಲ್ಲರೂ ಅವರವರ ಅಭಿಪ್ರಾಯ ಹೇಳಬಹುದು. ಹೈಕಮಾಂಡ್ ಯಾರೇ ನಾಯಕ ಮಾಡಿದರು ಕೂಡ ಅವರನ್ನು ನಾವು ಒಪ್ಪಿಕೊಳ್ಳುತ್ತೇವೆ ಹಲೋ ಸಚಿವ ಭೈರತಿ ಸುರೇಶ್ ತಿಳಿಸಿದರು.








