ಬೆಂಗಳೂರು: ರಾಜ್ಯದ ಒಂದು ವಿಧಾನಪರಿಷತ್ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ ಮಾಡಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ಅಕ್ಟೋಬರ್ 21ರಂದು ಮತದಾನ ನಡೆದು, ಅಂದೇ ಮತ ಏಣಿಕೆಯ ನಂತ್ರ ಫಲಿತಾಂಶ ಪ್ರಕಟವಾಗಲಿದೆ. ಈ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಉಪ ಚುನಾವಣೆ ನಿಗದಿ ಪಡಿಸಲಾಗಿದೆ. ಕೋಟಾ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದಂತ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು. ಕೋಟಾ ಶ್ರೀನಿವಾಸ ಪೂಜಾರಿಯವರು ಸಂಸದರಾಗಿ ಆಯ್ಕೆಯಾದ ನಂತ್ರ ಅವರು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಒಂದು ಸ್ಥಾನಕ್ಕೆ ಈಗ ಉಪ ಚುನಾವಣೆ ಘೋಷಣೆಯಾಗಿತ್ತು.
ವಿಧಾನ ಪರಿಷತ್ ಒಂದು ಸ್ಥಾನಕ್ಕೆ ಉಪ ಚುನಾವಣೆಗಾಗಿ ಸೆ.26ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅಕ್ಟೋಬರ್.3 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅಕ್ಟೋಬರ್.4ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್.7 ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನಾಂಕವಾಗಿದೆ.
ಇನ್ನೂ ಅಕ್ಟೋಬರ್.21ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಈ ಬಳಿಕ ಅಕ್ಟೋಬರ್.24ರಂದು ಮತಏಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.
ಇಂತಹ ದಕ್ಷಿಣ ಕನ್ನಡ ಜಿಲ್ಲೆಯ ವಿಧಾನ ಪರಿಷತ್ ಉಪ ಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಯನ್ನಾಗಿ ಕಿಶೋರ್ ಕುಮಾರ್ ಪುತ್ತೂರ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
Good News: ಹಿರಿಯ ನಾಗರೀಕರಿಗೆ ಗುಡ್ ನ್ಯೂಸ್: ಮಾಸಾಶನ ಹೆಚ್ಚಳ – ಸಿಎಂ ಸಿದ್ಧರಾಮಯ್ಯ ಘೋಷಣೆ
BREAKING : ಬೆಳಗಾವಿಯಲ್ಲಿ ಹೃದಯ ವಿದ್ರಾವಕ ಘಟನೆ : 17 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!