ಬೆಂಗಳೂರು : ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.
ಬೆಂಗಳೂರಿನಿಂದ ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ರಾತ್ರಿ 11.20ರ ಸುಮಾರಿಗೆ ಮೊದಲಿಗೆ ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ವಿಮಾನವನ್ನು ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.
170 ಕ್ಕೂ ಹೆಚ್ಚು ಪ್ರಯಾಣಿಕರಿದ್ದ AI 1132 ಏರ್ ಇಂಡಿಯಾ ವಿಮಾನ ಬೆಂಗಳೂರಿನಿಂದ ಕೊಚ್ಚಿಗೆ ತೆರಳುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ತುರ್ತು ಭೂಸ್ಪರ್ಶಮಾಡಲಾಗಿದೆ.