ಕೊಡಗು : ವಸತಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಈ ಒಂದು ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕ್ಯಾತೆ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 7 ನೇ ತರಗತಿ ಓದುತ್ತಿದ್ದ ಪೂರ್ವಿಕಾ ಎಂದು ತಿಳಿದುಬಂದಿದ್ದಿ, ಪೂರ್ವಿಕ ನಿನ್ನೆ ಏಕಾಏಕಿ ಕುಸಿದು ಬಿದ್ದಿದ್ದಾಳೆ. ಈ ಹಿನ್ನೆಲೆಯಲ್ಲಿ ಪೂರ್ವಿಕ ಸಾವು ಅನುಮಾನ ಮೂಡಿಸಿದೆ. ಕುಸಿದು ಬಿದ್ದ ಪೂರ್ವಿಕಾಳನ್ನು ಶಿಕ್ಷಕರು ತಕ್ಷಣ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಅಲ್ಲಿ ಚಿಕಿತ್ಸೆ ನೀಡಿದ ಬಳಿಕ ಹಾಸನದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಮಾರ್ಗಮಧ್ಯೆ ಬಾಲಕಿ ಮೃತಪಟ್ಟಿದ್ದಾಳೆ.ಬಾಲಕಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶವವನ್ನು ಸದ್ಯ ಶವಾಗಾರದಲ್ಲಿಡಲಾಗಿದೆ. ಘಟನೆ ಕುರಿತು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.