ಕೊಡಗು : ರಾಜ್ಯದಲ್ಲಿ ಇದೀಗ ಒಂದು ಕಡೆ ವರುಣ ಅಬ್ಬರಿಸುತ್ತಿದ್ದು ಭಾರಿ ಮಳೆ ಆಗುತ್ತಿರುವುದರಿಂದ ಬೆಂಗಳೂರು ಮಹಾನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅವಾಂತರ ಸೃಷ್ಟಿಯಾಗಿವೆ. ಇದೀಗ ಕೊಡಗು ಜಿಲ್ಲೆಯಲ್ಲಿ ಬಿರುಗಾಳಿ ಮತ್ತು ಭಾರಿ ಮಳೆಗೆ ಬೃಹತ್ ಗಾತ್ರದ ಮರ ಉರುಳಿ ಬಿದ್ದು ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಸಾವನಪ್ಪಿದ್ದಾರೆ.
ಹೌದು ಬಿರುಗಾಳಿ ಸಹಿತ ಮಳೆಗೆ ಮರ ಬಿದ್ದು ಕೂಲಿ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅರ್ಜಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಮನೆಯ ಹಿಂಭಾಗ ಪಾತ್ರ ತೊಳೆಯುತ್ತಿದ್ದ ವೇಳೆ ಗೌರಿ (60) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಮರ ಬಿದ್ದಿದ್ದರಿಂದ ಗಾಯಗೊಂಡಿದ್ದ ಗೌರಿ ಸ್ಥಳದಲ್ಲೇ ಸಾವನಪ್ಪಿದ್ದಾರೆ.