ಕೊಡಗು : ತಾಂತ್ರಿಕ ದೋಷದಿಂದ ನಡು ರಸ್ತೆಯಲ್ಲಿ ಕಾರು ಒಂದು ಹೊತ್ತಿ ಉರಿದಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಾಳತ್ ಮನೆ ರಾಷ್ಟ್ರೀಯ ಹೆದ್ದಾರಿ ಬಳಿ ಕಾರೊಂದು ಹೊತ್ತಿ ಉರಿದಿರುವ ಘಟನೆ ನಡೆದಿದೆ.
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಾಳತ್ ಮನೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಾಂತ್ರಿಕ ದೋಷದಿಂದ ನಡು ರಸ್ತೆಯಲ್ಲಿ ಕಾರು ಹೊತ್ತಿ ಉರಿದಿದೆ. ಈ ವೇಳೆ ರಸ್ತೆ ಬದಿ ಅರಣ್ಯಕ್ಕೂ ಈ ವೇಳೆ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ.
ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದೆ. ಅದೃಷ್ಟವಶಾತ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯುವಕರಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತಂತೆ ಮಡಿಕೇರಿ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.