ಕೊಡಗು : ಕಳೆದ ಕೆಲವು ದಿನಗಳ ಹಿಂದೆ ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಓರ್ವ ಕೂಲಿ ಕಾರ್ಮಿಕ ಮಹಿಳೆ ಸೇರಿದಂತೆ ಇಬ್ಬರು ಬಲಿಯಾಗಿದ್ದರು. ಇದೀಗ ಕೊಡಗು ಜಿಲ್ಲೆಯಲ್ಲಿ ಕಾಡಾಯ ದಾಳಿಯಿಂದ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಹೌದು ಕಾಡಾನೆ ದಾಳಿಯಿಂದ ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯವಾಗಿದ್ದು, ವಿರಾಜಪೇಟೆ ತಾಲೂಕಿನ ಕರಡಿಗೋಡು ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕರಡಿಗೋಡು ಗ್ರಾಮದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕರಾದಂತಹ ಸಾಬು ಅಲಿ ಮತ್ತು ಕಣ್ಣಣ್ ಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ. ಗಾಯಗೊಂಡ ಕಾರ್ಮಿಕರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.