ಕೋಲಾರ : ಕೊಲೆ, ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನ ಬಂಧಿಸುವ ವೇಳೆ ಪೊಲೀಸರ ಮೇಲೆಯೇ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದ್ದು, ಹಲ್ಲೆ ನಡೆಸಿದ ರೌಡಿ ಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿ ಬಂಧಿಸಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ಆಂಡ್ರಸನ್ ಪೇಟೆಯಲ್ಲಿ ನಡೆದಿದೆ.
ಹೌದು ಬಂಧಿತ ಆರೋಪಿಯನ್ನ ಸ್ಟಾಲಿನ್ ಎಂದು ಹೇಳಲಾಗುತ್ತಿದ್ದು, ಈತನ ಮೇಲೆ ಕೊಲೆ, ಸುಲಿಗೆ ಹಲವು ಪ್ರಕರಣಗಳು ದಾಖಲಾಗಿದ್ದವು. ಹಾಗಾಗಿ ಈತನನ್ನು ಇಂದು ಪೊಲೀಸರು ಬಂದಾಗ ಪೊಲೀಸ್ ಪೇದೆಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ.
ಮಚ್ಚಿನಿಂದ ಹಲ್ಲೆ ನಡೆಸಿದ್ದರಿಂದ ಪೊಲೀಸ್ ಪೇದೆ ಸುನಿಲ್ ಗಾಯಗೊಂಡಿದ್ದಾರೆ. ಘಟನೆ ಬಳಿಕ ಎಚ್ಚೆತ್ತ ಪೊಲೀಸರು ಕೂಡಲೇ ರೌಡಿಶೀಟರ್ ಮೇಲೆ ಫೈರಿಂಗ್ ಮಾಡಿದ್ದಾರೆ. ಬಲಗಾಲಿಗೆ ಗುಂಡಿನೇಟು ತಗುಲಿ ಕುಸಿದು ಬಿದ್ದ ರೌಡಿಶೀಟರ್ ಸ್ಟಾಲಿನ್. ಸದ್ಯ ಆರೋಪಿಯನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಆಂಡ್ರಸನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.