ಕೋಲಾರ : ಕೋಲಾರ ಲೋಕಸಭಾ ಟಿಕೆಟ್ ಸಂಬಂಧ ಕಾಂಗ್ರೆಸ್ನಲ್ಲಿ ಭುಗಿಲೆದ್ದ ಅಸಮಾಧಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಶಮನಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಸಿಎಂ ನಿವಾಸ ಕಾವೇರಿಯಲ್ಲಿ ನಡೆದ ಸಂಧಾನ ಸಭೆ ನಡೆದಿದ್ದು, ಅದು ಯಶಸ್ವಿಯಾಗಿದೆ. ಹಾಗಾದ್ರೆ, ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂಬುವುದೇ ನಿಗೂಢವಾಗಿದೆ.
ಸಂಧಾನ ಸಭೆಯ ಬಳಿಕ ಮಾತನಾಡಿದ ಸಚಿವ ಭೈರತಿ ಸುರೇಶ್ ಕೋಲಾರದಲ್ಲಿ ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ.ಸಿಎಂ ನಿವಾಸ ಕಾವೇರಿಯಲ್ಲಿ ಸಭೆ ಬಳಿಕ ಸಚಿವ ಭೈರತಿ ಸುರೇಶ್ ಹೇಳಿಕೆ ನೀಡಿದ್ದು, ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಒಪ್ಪಿದ್ದಾರೆ ಟಿಕೆಟ್ ಯಾರಿಗೆ ನೀಡಿದರು ಬದ್ಧರಾಗಿರುತ್ತೇವೆ ಎಂದು ಶಾಸಕರು ಹೇಳಿದ್ದಾರೆ ಸಿ ಎಂ ಡಿ ಸಿ ಎಂ ನೇತೃತ್ವದ ಸಭೆಯಲ್ಲಿ ಕೋಲಾರ ಶಾಸಕರು ಈ ರೀತಿ ಹೇಳಿಕೆ ನೀಡಿದ್ದಾರೆ.
ಏನೇ ನಿನ್ನ ಅಭಿಪ್ರಾಯ ಇದ್ದರೂ ಸರಿಪಡಿಸುವುದಾಗಿ ಸಿಎಂ ನಿವಾಸದ ಕಾವೇರಿ ಬಳಿ ಸಚಿವ ಎಂಸಿ ಸುಧಾಕರ್ ಹೇಳಿದ್ದಾರೆ.ಸಿಎಂ ಡಿಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ ನಮ್ಮಿಂದ ಪಕ್ಷಕ್ಕೆ ಹಾನಿಯಾಗಲು ಅವಕಾಶ ನೀಡುವುದಿಲ್ಲ.ಪಕ್ಷದ ಆದೇಶಕ್ಕೆ ಗೌರವ ಕೊಟ್ಟು ಅವರು ಹೇಳಿದಂತೆ ನಡೆದುಕೊಳ್ಳುತ್ತೇವೆ. ನಿನ್ನೆ ಆದಂತಹ ಸಮಸ್ಯೆ ಬಗ್ಗೆ ಸಿಎಂ ಡಿಸಿಎಂ ಬಳಿ ಹೇಳಿಕೊಂಡಿದ್ದೇವೆ. ರಾಜಿನಾಮೆ ನೀಡಲು ಮುಂದಾಗಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತೇವೆ ಎಂದು ಸಿಎಂ ನಿವಾಸ ಕಾವೇರಿ ಬಳಿ ಸಚಿವ ಎಬ್ಬಿಸುವುದಾಕರ್ ತಿಳಿಸಿದರು.
ಕೊನೆಯ ಹಂತದಲ್ಲಿ ಈ ಗೊಂದಲಗಳು ಆಗಬಾರದಿತ್ತು. ನಾಯಕರ ಸೂಚನೆಗೆ ನಾವು ಬದ್ದ. ಇದು ಎಡಗೈ, ಬಲಗೈ ಸಂಘರ್ಷ ಅಲ್ಲ. ಕೆಲವರ ಅಭಿಪ್ರಾಯ ಸಂಖ್ಯೆ ಜಾಸ್ತಿ ಇದೆ ಕೊಡಿ ಅಂತ ಇತ್ತು. ಅದೊಂದು ಕೆಟ್ಟ ಘಳಿಗೆ. ಅಂತಿಮವಾಗಿ ಪಕ್ಷದ ಅಭ್ಯರ್ಥಿ ಗೆಲ್ಲಬೇಕು. ಈ ಘಟನೆಗೆ ವಿಶಾದ ವ್ಯಕ್ತಪಡಿಸುತ್ತೇವೆ. ಇದರಿಂದ ಪಕ್ಷಕ್ಕೆ ಮುಜುಗರ ಆಗಿದೆ. ನಾವು ಕ್ಷಮೆ ಕೇಳಿದ್ದೇವೆ, ಯಾವುದೇ ಅಭ್ಯರ್ಥಿ ಬಗ್ಗೆ ಚರ್ಚೆ ಆಗಿಲ್ಲ. ಆದ್ರೆ ಯಾರಿಗೆ ಟಿಕೆಟ್ ಕೊಟ್ರೂ ಒಂದಾಗಿ ಕೆಲಸ ಮಾಡ್ತೀವಿ. ನಮ್ಮ ಜಗಳ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೆ ಲಾಭ ಆಗಲ್ಲ. ನಮ್ಮ ಪಕ್ಷದ ಅಭ್ಯರ್ಥಿಯೇ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.