ಕೋಲಾರ : ಕಾಂಗ್ರೆಸ್ ಕಚೇರಿಯಲ್ಲಿ ಕರೆಯಲಾಗಿದ್ದ ಬೂತ್ ಮಟ್ಟದ ಏಜೆಂಟರ್ ಸಭೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ನಡುವೆ ಹೊಡೆದಾಟ ನಡೆದಿದೆ. ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗರು ಕೆಎಚ್ ಮುನಿಯಪ್ಪ ಬೆಂಬಲಿಗರು, ಕಾರ್ಯಕರ್ತರು ಹಾಗೂ ಮುಖಂಡರ ಮಧ್ಯೆ ಮಾರಾಮಾರಿ ನಡೆದಿದೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ವೀಕ್ಷಕರಾದ ರಾಜ್ ಕುಮಾರ್ ನೇತೃತ್ವದಲ್ಲಿ ಇಂದು ಜಿಲ್ಲಾ ಕಚೇರಿಯಲ್ಲಿ ಬೂತ್ ಮಟ್ಟದ ಏಜೆಂಟರನ್ನ ನೇಮಿಸುವ ಸಲುವಾಗಿ ಸಭೆ ಕರೆಯಲಾಗಿತ್ತು. ನಾಯಕರ ಫೋಟೋ ಹಾಕದೆ ತಾರತಮ್ಯ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು ಗಲಾಟೆ ನಡೆದಿದೆ.ಕೆಪಿಸಿಸಿ ಕಾರ್ಯದರ್ಶಿ ರಮೇಶ್ ಮತ್ತು ರಾಜಕುಮಾರ್ ಸಮ್ಮುಖದಲ್ಲಿ ಪರಸ್ಪರ ಬಡಿದಾಟ ನಡೆದಿದೆ.
ಕಚೇರಿಯಲ್ಲಿ ಹಾಕಲಾಗಿದ್ದ ಬ್ಯಾನರ್ ನಲ್ಲಿ ರಮೇಶ್ ಕುಮಾರ್ , ಕೊತ್ತೂರು ಮಂಜುನಾಥ್, ನಸೀರ್ ಅಹ್ಮದ್ ಫೋಟೋ ಇಲ್ಲದ ಹಿನ್ನಲೆ ಗಲಾಟೆ ನಡೆದಿದ್ದು ಕಾರ್ಯಕರ್ತರು ಮತ್ತು ಮುಖಂಡರ ಮಧ್ಯೆ ಹೊಡೆದಾಟ ನಡೆದಿದೆ. ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗರು ಮತ್ತು ಕೆ.ಹೆಚ್.ಮುನಿಯಪ್ಪ ಬೆಂಬಲಿಗರ ನಡುವೆ ಮಾರಾಮಾರಿಯಾಗಿದೆ.
ಇದೆ ವೇಳೆ ಊರು ಬಾಗಿಲು ಶ್ರೀನಿವಾಸ ಮೇಲೆ ಏಕಾಯಕಿ ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ ಶ್ರೀನಿವಾಸ್ ಕೋಲಾರ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿದ್ದಾರೆ. ಕೊತ್ತೂರು ಮಂಜುನಾಥ್ ಬೆಂಬಲಿಗರಿಂದ ಹಲ್ಲೆ ನಡೆದಿದೆ ಎನ್ನಲಾಗಿದ್ದು, ಬೂತ್ ಮಟ್ಟದ ಏಜೆಂಟರ ಸಭೆಯಲ್ಲಿ ಹೊಡೆದಾಟ ನಡೆಸಿರುವ ಘಟನೆ ನಡೆದಿದೆ.