ಕೋಲಾರ : ನಿನ್ನೆ ಕೋಲಾರದ ಖಾಸಗಿ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ಶೌಚಾಲಯದಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆಗೆ ಸಂಬಂಧಿಸಿದಂತೆ, ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಹೌದು ನಿನ್ನೆ ನಗರದ ಹೊರ ವಲಯದಲ್ಲಿರುವ ಖಾಸಗಿ ಕಾಲೇಜಿನಲ್ಲಿ ವಿಚಿತ್ರ ಘಟನೆ ನಡೆದಿದೆ. ಕಾಲೇಜು ಶೌಚಾಲಯದಲ್ಲಿ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಳು. ಹೊಟ್ಟೆ ನೋವು ಎಂದು ಬಾಲಕೇಶ್ವರಕ್ಕೆ ಎದ್ದೇಳಿದಾಗ ಬಾಲಕಿಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ ಮಗುವಿನ ಅಳುವ ಸದ್ದು ಕೇಳಿ, ಕಾಲೇಜಿನ ಸಿಬ್ಬಂದಿ ಹಾಗೂ ಉಪನ್ಯಾಸಕರು ಓಡಿ ಬಂದು ಬಾಲಕಿ ಮಗುಗೆ ಜನ್ಮ ನೀಡಿರುವುದನ್ನು ನೋಡಿ ಶಾಕ್ ಆಗಿದ್ದಾರೆ.

ಇನ್ನು ಹೆರಿಗೆಯಾದ ಬಾಲಕಿ ಶ್ರೀನಿವಾಸಪುರ ತಾಲ್ಲೂಕಿನಿಂದ ಕಾಲೇಜಿಗೆ ಬರುತ್ತಿದ್ದಳು. ಬಾಲಕಿಗೆ ಹೆರಿಗೆ ಆಗಿರುವುದನ್ನು ಕಂಡು ಕಾಲೇಜಿನ ಆಡಳಿತ ಮಂಡಳಿಯವರು ತಕ್ಷಣವೇ ಸಮೀಪದ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಗೆ ತಾಯಿ ಹಾಗೂ ಮಗುವನ್ನು ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಬಾಲಕಿಯ ಕಾಲೇಜಿನ ಸಿಬ್ಬಂದಿ ಪೋಷಕರಿಗೆ ವಿಷಯ ತಿಳಿಸಿದ್ದಾರೆ. ಆಗ ಪೋಷಕರ ಮನವಿ ಮೇರೆಗೆ ಬಾಲಕಿ ತನ್ನ ಫೇಸ್‌ಬುಕ್ ಗೆಳೆಯನಿಂದ ತನ್ನ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆದಿದ್ದು, ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಾಗಿ ಪೊಲೀಸರಿಗೆ ದೂರು ಕೊಟ್ಟಿದ್ದಾಳೆ.

ಇನ್ನು ಪೋಕ್ಸೊ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಳಬಾಗಿಲು ಮೂಲದ ಯುವಕನನ್ನು ಬಂಧಿಸಿದ್ದಾರೆ. ಬಾಲಕಿ ಗರ್ಭಿಣಿ ಯಾಗಿರುವುದು ಪೋಷಕರ ಗಮನಕ್ಕೆ ಬಾರದೆ ಇರುವುದಾ? ಅಥವಾ ಬಾಲಕಿಗೂ ತನಗೆ ಗೊತ್ತಾಗದೆ ಇರುವುದಾ? ಎಂದು ಇದುವರೆಗೂ ತಿಳಿದು ಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.ಈ ಘಟನೆ ಕುರಿತಂತೆ ಕೋಲಾರ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

Share.
Exit mobile version