ಚನ್ನೈ: ನಟಿ ದೀಪಾ ಆಲಿಯಾಸ್ ಪೌಲೆನ್ ಜೆಸ್ಸಿಕಾ ಚೆನ್ನೈನ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಭಾನುವಾರ ಮಧ್ಯಾಹ್ನ ಚೆನ್ನೈನ ವಿರುಗಂಬಕ್ಕಂನಲ್ಲಿರುವ ತನ್ನ ಅಪಾರ್ಟ್ಮೆಂಟ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎನ್ನಲಾಗಿದೆ. ವೈಯಕ್ತಿಕ ಜೀವನದದಲ್ಲಿ ಆದ ಅಹಿತಕರ ಘಟನೆಯಿಂದಾಗಿ ಅವರು ಆತ್ಮಹತ್ಯೆಯ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕಾರ, ಕಳೆದ ಕೆಲವು ವರ್ಷಗಳಿಂದ ಏಕಾಂಗಿಯಾಗಿ ವಾಸಿಸುತ್ತಿದ್ದ ದೀಪಾ ಒತ್ತಡದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೀಪಾ ಅವರ ಕುಟುಂಬ ಸದಸ್ಯರು ಅವಳನ್ನು ಸಂಪರ್ಕಿಸಲು ಕರೆ ಮಾಡಿದರೂ, ಅವಳು ಅವರ ಫೋನ್ ಅನ್ನು ಸ್ವೀಕರ ಮಾಡಿಲ್ಲ ಎನ್ನಲಾಗಿದ್ದು. ದೀಪಾಳ ಸ್ನೇಹಿತ ಫ್ಲಾಟ್ ಗೆ ಹೋದಾಗ ಅವಳು ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಇರುವುದನ್ನು ನೋಡಿದ್ದು. ಘಟನೆ ಸಂಬಂಧ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.