ಕೊಪ್ಪಳ : ಪೊಲೀಸ್ ಸಿಬ್ಬಂದಿಗಳಿಗೆ ಬಂದೂಕು ತರಬೇತಿ ನೀಡುತ್ತಿದ್ದ ವೇಳೆ, ಆಕಸ್ಮಿಕವಾಗಿ ಗುಂಡು ಸಿಡಿದು ಕುರಿ ಕಾಯುತ್ತಿದ್ದ ಮಹಿಳೆಗೆ ತಗೋಳಿ ಗಂಭೀರವಾದ ಗಾಯಗಳಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಬ್ಬಲಗುಡ್ಡ ಗ್ರಾಮದಲ್ಲಿ ನಡೆದಿದೆ.
ದ್ರಾಕ್ಷಾಯಿನಿ ರೇಣುಕಾ ( 34) ಗುಂಡು ತಗುಲಿ ಗಾಯಗೊಂಡಿರುವ ಮಹಿಳೆ ಎಂದು ತಿಳಿದುಬಂದಿದೆ. ಗಾಯಗೊಂಡ ಮಹಿಳೆಯನ್ನು ತಕ್ಷಣವೇ ಮುನಿರಾಬಾದ್ ಡ್ಯಾಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
ದ್ರಾಕ್ಷಾಯಿನಿ ಹೊಲದಲ್ಲಿ ಕುರಿಹಟ್ಟಿಯಿಂದ ಪಾತ್ರೆಗಳನ್ನು ಸ್ವಚ್ಛಗೊಳಿಸಲು ಬಂದಿದ್ದ ವೇಳೆ, ಪೊಲೀಸರಿಂದ ಹಾರಿಸಲಾದ ಗುಂಡು ಅಚಾನಕ್ ಎಡ ಕೈ ಗೆ ತಗುಲಿದ್ದು, ಮಹಿಳೆಯ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಆಸ್ಪತ್ರೆಗೆ ಭೇಟಿ ನೀಡಿ ಹಿರಿಯ ಪೊಲೀಸ್ ಅಧಿಕಾರಿಗಳು ಮಹಿಳೆಯ ಆರೋಗ್ಯವನ್ನು ವಿಚಾರಿಸಿದ್ದಾರೆ.