ಕೊಪ್ಪಳ : ಹಾಸನದಲ್ಲಿ ನಾಲ್ವರು ಮಕ್ಕಳು ಹಾಗೂ ರಾಮನಗರದಲ್ಲಿ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಬೆನ್ನಲ್ಲೇ, ಇದೀಗ ಕೊಪ್ಪಳದಲ್ಲಿ ಕೂಡ ಒಂದು ಘಟನೆ ನಡೆದಿದ್ದು, ಸ್ನೇಹಿತರ ಜೊತೆಗೆ ತೆರಳಿದ ಯುವಕನೊಬ್ಬ ನೀರುಪಾಲಾಗಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರ ಕೆರೆಯಲ್ಲಿ ನಡೆದಿದೆ.
ಸಾಣಾಪುರ ಕೆರೆಯಲ್ಲಿ ಮಂಜುನಾಥ್ (19) ಎನ್ನುವ ಯುವಕ ನೀರು ಪಾಲಾಗಿರುವ ಘಟನೆ ನಡೆದಿದೆ.ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರ ಕೆರೆಯಲ್ಲಿ ಈ ಘಟನೆ ನಡೆದಿದೆ. ಮಂಜುನಾಥ್ ಶವಕ್ಕಾಗಿ ಇದೀಗ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಗಂಗಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.