ಕೊಪ್ಪಳ : ನಾವು ಕಾಂಗ್ರೆಸ್ ಗೆ ಮತ ಹಾಕುವುದಿಲ್ಲ ಬಿಜೆಪಿಗೆ ಮತ ಹಾಕುತ್ತೇವೆ ಎಂದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದಲ್ಲಿ ಕಳೆದ ರಾತ್ರಿ ಘಟನೆ ನಡೆದಿದೆ.
ನಿನ್ನೆ ರಾತ್ರಿ ಗ್ರಾಮದಲ್ಲಿ ಕಾಂಗ್ರೆಸ್ ಪರವಾಗಿ ಕಾರ್ಯಕರ್ತರು ಪ್ರಚಾರ ಮಾಡುತ್ತಿದ್ದರು. ದ್ಯಾಮಣ್ಣ ಮನೆಗೆ ಬಂದ ಕಾರ್ಯಕರ್ತರು ಕಾಂಗ್ರೆಸ್ಗೆ ಓಟ ಹಾಕುವಂತೆ ಮನವಿ ಮಾಡಿದ್ದಾರೆ. ಈ ವೇಳೆ ದ್ಯಾಮಣ್ಣ ನಾನು ಕಾಂಗ್ರೆಸ್ಗೆ ಮತ ಹಾಕಲ್ಲ. ನಾವು ಬಿಜೆಪಿಗೆ ಮತ ಹಾಕುತ್ತೇವೆ ಅಂತ ಹೇಳಿದ್ದಾರೆ.
ಇದೇ ಕಾರಣಕ್ಕೆ ಜಗಳ ಮಾಡಲಾಗಿದ್ದು, ಗವಿಸಿದ್ದಪ್ಪ, ಗಂಗಣ್ಣ, ನೀಲಪ್ಪ, ಬಸವರಾಜ್ ಸೇರಿದಂತೆ ಎಂಟಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರಿಂದ ದ್ಯಾಮಣ್ಣ ಮತ್ತು ಅವರ ಕುಟುಂಬದವರ ಮೇಲೆ ಹಲ್ಲೆ ಮಾಡಲಾಗಿದೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.