ಕೊಪ್ಪಳ : ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗೊಳ್ಳಿ ಗುಡಿಸಲು ಒಂದು ಹೊತ್ತಿ ಉರಿದು ಸುಟ್ಟು ಭಸ್ಮವಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಗೌರಿಪುರ ಎಂಬ ಗ್ರಾಮದಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಗೌರಿಪುರ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಗುಡಿಸಲಿಗೆ ಬೆಂಕಿ ಹತ್ತಿಕೊಂಡಿದೆ.ಗ್ರಾಮದ ವೀರೇಶ್ ಎನ್ನುವವರ ಗುಡಿಸಲಿಗೆ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಹದಿನೈದು ಸಾವಿರ ಹಣ ಗೃಹಪಯೋಗಿ ವಸ್ತುಗಳು ಸುಟ್ಟು ಭಸ್ಮವಾಗಿವೆ.
ತಕ್ಷಣ ಸ್ಥಳಕ್ಕೆ ಕನಕಗಿರಿ ತಾಲೂಕಿನ ಪೊಲೀಸ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಕನಕಗಿರಿ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ