ಬೆಂಗಳೂರು: ಕೊಪ್ಪಳದ ಗಂಗಾವತಿಯಲ್ಲಿ ಪ್ರವಾಸಿಗರ ಮೇಲೆ ಹಲ್ಲೆ, ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣ ಸಂಬಂಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ್ಯ. ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕಟ್ಟುನಿಟ್ಟಿನ ತನಿಖೆ ಕೈಗೊಂಡು, ಅಪರಾಧಿಗಳನ್ನು ಶೀಘ್ರ ಪತ್ತೆಹಚ್ಚುವಂತೆ ಸೂಚಿಸಿದ್ದೇನೆ ಎಂದಿದ್ದಾರೆ.
ಈ ಪ್ರಕರಣದ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ. ರಾಜ್ಯಕ್ಕೆ ಬರುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಅಗತ್ಯ ಕ್ರಮ ವಹಿಸಲಾಗುವುದು ಎಂಬುದಾಗಿ ಹೇಳಿದ್ದಾರೆ.
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ್ಯ.
ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕಟ್ಟುನಿಟ್ಟಿನ ತನಿಖೆ ಕೈಗೊಂಡು, ಅಪರಾಧಿಗಳನ್ನು ಶೀಘ್ರ ಪತ್ತೆಹಚ್ಚುವಂತೆ ಸೂಚಿಸಿದ್ದೆ.
ಪ್ರಕರಣದ ಸಂಬಂಧ ಪೊಲೀಸರು…— Siddaramaiah (@siddaramaiah) March 8, 2025
BREAKING NEWS: ಮಣಿಪುರದಲ್ಲಿ ಕುಕಿ ಸದಸ್ಯರ ನಡುವೆ ಘರ್ಷಣೆ: ಓರ್ವ ಸಾವು, 27 ಭದ್ರತಾ ಸಿಬ್ಬಂದಿಗೆ ಗಾಯ
‘ಸಮರ್ಪಕ ವಿದ್ಯುತ್’ ಪೂರೈಸುವಂತೆ ಹೆಸ್ಕಾಂ ಅಧಿಕಾರಿ ಭೇಟಿಯಾಗಿ ‘ಅಶೋಕ್ ಬೇಳೂರು’ ಮನವಿ