ಕೊಪ್ಪಳ : ತಮ್ಮ ಪಾಡಿಗೆ ತಾವು ಮಕ್ಕಳು ಎಂದಿನಂತೆ ಶಾಲೆಗೆ ಹೋಗುತ್ತಿದ್ದಾಗ, ಏಕಾಏಕಿ ಬೀದಿ ನಾಯಿಗಳು ಮೂರು ಮಕ್ಕಳ ಮೇಲೆ ದಾಳಿ ಮಾಡಿವೆ. ದೇಹದ ಹಲವೆಡೆ ಕಚ್ಚಿ ಗಾಯಗೊಳಿಸಿವೆ. ಕೂಡಲೇ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿರುವ ಘಟನೆ ಕೊಪ್ಪಳ ನಗರದಲ್ಲಿ ನಡೆದಿದೆ.
ಇಂದು ಬೆಳಿಗ್ಗೆ ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬೀದಿ ನಾಯಿಗಳ ದಾಳಿ ಮಾಡಿವೆ. ಕೊಪ್ಪಳದ ದಿನ್ಯಾರ್ ಬಡಾವಣೆ ಹಾಗೂ ಕನಕನಗಿರಿ ಬಡಾವಣೆಯಲ್ಲಿ ಘಟನೆ ನಡೆದಿದ್ದು ಮೂರು ಮಕ್ಕಳನ್ನು ಬೀದಿ ನಾಯಿಗಳು ಕಚ್ಚಿ ಗಾಯಗೊಳಿಸಿವೆ.
ಅಬ್ರಾರ್, ಫರ್ಹಾನ್ ಹಾಗೂ ಮಂಜುಗೆ ಬೀದಿ ನಾಯಿಗಳು ಕಚ್ಚಿ ಘಾಸಿಗೊಳಿಸಿವೆ. ಕೂಡಲೇ ಗಾಯಗೊಂಡ ವಿದ್ಯಾರ್ಥಿಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ವೇಳೆ ಸ್ಥಳೀಯರು ಕೊಪ್ಪಳ ನಗರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಒತ್ತಾಯಪಡಿಸಿದ್ದಾರೆ.