ಬೆಂಗಳೂರು: ಸಂಸದರಾಗಿ ಆಯ್ಕೆಯಾದ ನಂತ್ರ, ಕೋಟಾ ಶ್ರೀನಿವಾಸ ಪೂಜಾರಿಯವರು ವಿಧಾನಪರಿಷತ್ ಸದಸ್ಯಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ವಿಧಾನ ಪರಿಷತ್ ವಿಪಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದಂತೆ ಆಗಿದೆ.

ಇಂದು ಸಭಾಪತಿ ಬಸವರಾಜ ಹೊರಟ್ಟಿಯವರನ್ನು ಭೇಟಿಯಾದಂತ ನೂತನ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರು, ತಮ್ಮ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದರು.

ಅಂದಹಾಗೇ ಕೋಟಾ ಶ್ರೀನಿವಾಸ ಪೂಜಾರಿ ಅವರು ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದರು. ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು. ಈ ಹಿನ್ನಲೆಯಲ್ಲಿ ವಿಧಾನಪರಿಷತ್ ಸದಸ್ಯ ಸ್ಥಾನ, ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಭಾರತದಲ್ಲಿ ಈ ಆಹಾರಗಳ ಸೇವನೆ ನಿಷೇಧ : ಇಲ್ಲಿದೆ ನೋಡಿ ʻFSSAIʼ ನ ನಿಷೇಧಿತ ಆಹಾರಗಳ ಪಟ್ಟಿ | Banned Foods

ಸಿಕ್ಕಿಂ ಪ್ರವಾಹ: 2,000ಕ್ಕೂ ಹೆಚ್ಚು ಪ್ರವಾಸಿಗರ ಸ್ಥಳಾಂತರ

Share.
Exit mobile version