ಬೆಂಗಳೂರು : ಅನಾರೋಗ್ಯದ ನಡುವೆಯೂ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಕೆಲಸ ಮಾಡಿದ್ದಾರೆ ಎಂದು ಜನರು ಸಚಿವರ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಹೌದು, ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಆರೋಗ್ಯದಲ್ಲಿ ಸುಧಾರಿಕೆ ಕಂಡು ಬಂದಿದೆ ಎನ್ನಲಾಗಿದೆ. ಸದ್ಯ, ಸೋಶಿಯಲ್ ಮೀಡಿಯಾದಲ್ಲಿ ಸಚಿವರ ಫೋಟೋ ವೈರಲ್ ಆಗಿದ್ದು, ಲ್ಯಾಪ್ ಟಾಪ್ ಹಿಡಿದು ಕೆಲಸ ಮಾಡುತ್ತಿದ್ದ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಫೋಟೋ ಹರಿದಾಡುತ್ತಿದೆ.
ಇದಕ್ಕೆ ನೆಟ್ಟಿಗರು ಹಲವು ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಕೆಲವರು ಸಚಿವರಂದ್ರೆ ನಿಮ್ಮ ರೀತಿ ಇರಬೇಕು, ನಿಮ್ಮ ಕೆಲಸ ಇತರರಿಗೂ ಮಾದರಿ ಎಂದು ಕಮೆಂಟ್ ಮಾಡಿದ್ದಾರೆ. ಕೆಲವರು ವಿಶ್ರಾಂತಿ ಮಾಡಿ ಆರೋಗ್ಯದ ಬಗ್ಗೆ ಕೂಡ ಗಮನ ನೀಡಿ ಎಂದಿದ್ದಾರೆ.
BIGG NEWS : ‘PSI’ ನೇಮಕಾತಿ ಹಗರಣ : 11 ಮಂದಿ ಆರೋಪಿಗಳಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಜಾಮೀನು |PSI Scam