ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) 2022ರ ಕನ್ನಡ ರಾಜ್ಯೋತ್ಸವದ ( Kannada Rajyotsava 2022 ) ಪ್ರಯುಕ್ತ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸೋದಕ್ಕೆ ಆಸಕ್ತರಿಂದ ನೊಂದಣಿಗೆ ಆಹ್ವಾನಿಸಿದೆ.

BREAKING NEWS: ಓಲಾ, ಊಬರ್‌ಗೆ ಬಿಗ್‌ ರಿಲೀಫ್‌; ಸಾರಿಗೆ ಇಲಾಖೆ ಆದೇಶಕ್ಕೆ ಕೋರ್ಟ್‌ ಮಧ್ಯಂತರ ತಡೆ

ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ (  Karnataka Chief Secretary Vandita Sharma ಅವರು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಆ ಪತ್ರದಲ್ಲಿ ನಾಡು-ನುಡಿಯ ಬಗ್ಗೆ ಅಭಿಮಾನ ಮೂಡಿಸುವ ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಮೂಡಿಸುವ ಗೀತೆ-ಕವನಗಳನ್ನು ನಾಡಿನ ಹೆಮ್ಮೆಯ ಕವಿಗಳು ರಚಿಸಿದ್ದು, ಇವುಗಳ ಕೇಳುವಿಕೆಯು ನಮ್ಮಲ್ಲಿ ಅಭಿಮಾನವನ್ನು ಮೂಡಿಸುತ್ತದೆ ಎಂದಿದ್ದಾರೆ.

BIGG NEWS: ಹಾಸನಾಂಬೆ ದರ್ಶನಕ್ಕೆ ಮಳೆರಾಯ ಅಡ್ಡಿ; ಭಕ್ತರ ಸಂಖ್ಯೆ ಗಣನೀಯ ಇಳಿಕೆ

ಕಳೆದ ರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಾತಿನಿಧಿಕವಾಗಿ ಆಯ್ದ 3 ಕನ್ನಡ ಗೀತೆಗಳ ಸಮೂಹ ಗಾಯನವನ್ನು ವಿನೂತನವಾಗಿ ಲಕ್ಷ ಕಂಠ ಗಾಯನ ಶೀರ್ಷಿಕೆಯಡಿ ರಾಜ್ಯಾಧ್ಯಂತ ಆಯೋಜಿಸಿ, ಯಶಸ್ವಿಗೊಳಿಸಿದ ನಿಟ್ಟಿನಲ್ಲಿ, ಈ ವರ್ಷವೂ ಅಕ್ಟೋಬರ್ 28ರಂದು ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮವನ್ನು ಸರ್ಕಾರದ ವತಿಯಿಂದ ಆಯೋಜಿಸಲಾಗಿದ್ದು, ಈ ವಿಶೇಷ ಕಾರ್ಯಕ್ರಮದಲ್ಲಿ ಒಂದು ಕೋಟಿ ಜನರನ್ನು ಭಾಗಿಯಾಗಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

BREAKING NEWS : ಅಸ್ಸಾಂ ಸಿಎಂ ʻಹಿಮಂತ ಬಿಸ್ವಾ ಶರ್ಮಾʼಗೆ ‘ಝಡ್ ಪ್ಲಸ್’ ಭದ್ರತೆ: ಕೇಂದ್ರ ಸರಕಾರ ಆದೇಶ | ‘Z-Plus’ Security

ನೊಂದಣಿಗೆ ಈ ಕ್ರಮ ಅನುಸರಿಸಿ

ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮದಲ್ಲಿ ನೀವು ಹಾಡೋದಕ್ಕೆ ಭಾಗವಹಿಸಲು https://kannadasiri.karnataka.gov.in/kkg/public/ ಲಿಂಕ್ ಕ್ಲಿಕ್ ಮಾಡಿ, ಜಾಲತಾಣಕ್ಕೆ ಭೇಟಿ ನೀಡಿ. ಇಲ್ಲಿ ನೀವು ನೋಂದಣಿ ಮಾಡಿಕೊಳ್ಳುವ ಮೂಲಕ, ಗೀತ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ.

ಈ ಗೀತ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ, ಸ್ವಯಂ ಚಾಲಿತ ಆನ್ ಲೈನ್ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ.

6 ಗೀತ ಗಾಯನ

  1. ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ಜಯ ಭಾರತ ಜನನಿಯ ತನುಜಾತೆ
  2. ಹುಯಿಲಗೋಳ ನಾರಾಯಣರಾವ್ ವಿರಚಿತ ಉದಯವಾಗಲಿ ನಮ್ಮ ಚಲುವ ಕನ್ನಡ ನಾಡು
  3. ಡಾ.ಚನ್ನವೀರ ಕಣವಿ ಅವರ ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರಿ
  4. ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವಾ
  5. ಡಾ.ಡಿಎಸ್ ಕರ್ಕಿ ಅವರ ಹಚ್ಚೇವು ಕನ್ನಡದ ದೀಪ
  6. ಡಾ.ಹಂಸಲೇಖ ಅವರ ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು

Share.
Exit mobile version