ಬೆಂಗಳೂರು: ರಾಜ್ಯ ಸರ್ಕಾರದಿಂದ ಇಂದು ರಾಜ್ಯಾಧ್ಯಂತ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿತ್ತು. ಸರ್ಕಾರ ಕರೆ ಕೊಟ್ಟಿದ್ದಂತ ಈ ಕಾರ್ಯಕ್ರಮದಲ್ಲಿ ಕೆ ಎಸ್ ಆರ್ ಟಿ ಸಿ ಸಿಬ್ಬಂದಿಗಳು ಕೂಡ ಭಾಗವಹಿಸಿದ್ದರು. ಬೆಂಗಳೂರಿನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿ ಆವರಣದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಸುವ ಮೂಲಕ, ಸಾಥ್ ನೀಡಲಾಯಿತು.
ಕೇಂದ್ರ ಸರ್ಕಾರದಿಂದ ಪಿಂಚಣಿದಾರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ (ಡಿಆರ್) ಗೆ ಸಂಬಂಧಿಸಿದಂತೆ ಆದೇಶ
ಹೌದು.. ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಆಯೋಜಿಸಿದ್ದ ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮವನ್ನು ನಿಗಮದ ಕೇಂದ್ರ ಕಛೇರಿ, ಘಟಕಗಳು, ವಿಭಾಗಗಳು, ಕಾರ್ಯಾಗಾರಗಳು ಮತ್ತು ಬಸ್ ನಿಲ್ದಾಣಗಳಲ್ಲಿ “ನನ್ನ ನಾಡು ನನ್ನ ಹಾಡು” ಕನ್ನಡ ಗೀತೆಗಳನ್ನು ಹಾಡುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕೆ ಎಸ್ ಆರ್ ಟಿ ಸಿ ವ್ಯವಸ್ಥಾಪಕ ನಿರ್ದೇಶಕರಾದಂತ ವಿ ಅನ್ಬುಕುಮಾರ್, ನಿರ್ದೇಶಕರಾದ ಡಾ. ನವೀನ್ ಭಟ್ ವೈ, ಅಧಿಕಾರಿಗಳು ಹಾಗೂ ಕೇಂದ್ರ ಕಛೇರಿಯ ಎಲ್ಲಾ ಸಿಬ್ಬಂದಿಗಳು ಸಂಭ್ರಮದಿಂದ ಭಾಗವಹಿಸಿದರು.