ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರ ವಿರುದ್ಧ ಪೆನ್ ಡ್ರೈವ್ ಹಂಚಿಕೆ ಕುರಿತು ಆರೋಪಿಸಿದ್ದರಿಂದ ಇದೀಗ ಬಿಜೆಪಿಯ ಮುಖಂಡ ಹಾಗೂ ವಕೀಲ ದೇವರಾಜೇಗೌಡ ವಿರುದ್ಧ ಬೆಂಗಳೂರಿನ ಪಶ್ಚಿಮ ಕೆಪಿಸಿಸಿ ಪ್ರಚಾರ ಸಮಿತಿಯು ಇದೀಗ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.
ಹೌದು ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಕುರಿತಂತೆ ಇದರ ಹಿಂದೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕೈವಾಡ ಇದೆ ಎಂದು ಆರೋಪಿಸಿದ್ದರು. ಇದೀಗ ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೇವರಾಜೇಗೌಡ ವಿರುದ್ಧ ದೂರು ಸಲ್ಲಿಸಲಾಗಿದೆ. ಬೆಂಗಳೂರು ಪಶ್ಚಿಮ ಜಿಲ್ಲಾ ಕೆಪಿಸಿಸಿ ಪ್ರಚಾರ ಸಮಿತಿಯ ಎಸ್.ಮನೋಹರ್ ಎನ್ನುವವರು ದೂರು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ದೇವರಾಜೇಗೌಡ ಬ್ಲಾಕ್ ಮೈಲಾರ ಎಂದು ಈಗಾಗಲೇ ಆಗಿದ್ದಾರೆಂದು ಹೊಳೆನರಸೀಪುರ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದು ಬಹಿರಂಗವಾಗಿದೆ ಸರ್ಕಾರದ ವಿರುದ್ಧ ಆರೋಪಿಸುತ್ತಿದ್ದಾರೆ ಕಾಂಗ್ರೆಸ್ ನಾಯಕರ ವಿರುದ್ಧ ಆರೋಪಿಸುತ್ತಿದ್ದ ಈತನ ಹೀನ ಕೃತ್ಯ ಬಹಿರಂಗವಾಗಿದೆ. ದೇವರಾಜೇಗೌಡ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಂಡು ಬಂದಿಸಬೇಕು ದೇವರಾಜೇಗೌಡ ನೈಜ ಚಿತ್ರಣ ಹಿನ್ನೆಲೆ ಬಹಿರಂಗಪಡಿಸಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ನೇತೃತ್ವದಲ್ಲಿ ದೂರು ಸಲ್ಲಿಸಲಾಗಿದೆ.